ಕಾಂಗ್ರೆಸ್ ಪೊಳ್ಳು ಭರವಸೆಗಳನ್ನು ಈಡೇರಿಸಲು ಪರದಾಡುತ್ತಿದೆ: ಶಾಸಕ ಡಿ.ವೇದವ್ಯಾಸ್ ಕಾಮತ್ - Mahanayaka

ಕಾಂಗ್ರೆಸ್ ಪೊಳ್ಳು ಭರವಸೆಗಳನ್ನು ಈಡೇರಿಸಲು ಪರದಾಡುತ್ತಿದೆ: ಶಾಸಕ ಡಿ.ವೇದವ್ಯಾಸ್ ಕಾಮತ್

vedavsyasa
29/05/2023

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಸ್ತಿತ್ವಕ್ಕೆ ಬರುತ್ತಿದ್ದಂತೆ ಸಮುದಾಯಗಳ ನಡುವೆ ಒಡಕು ಮೂಡಿಸಿ ದ್ವೇಷದ ರಾಜಕಾರಣದ ಮೂಲಕ ವಿಷ ಬೀಜ ಬಿತ್ತುವ ಕೆಲಸ ನಡೆಯುತ್ತಿದೆ. ಅಲ್ಲಲ್ಲಿ ಬಿಜೆಪಿ ಕಾರ್ಯಕರ್ತರ, ಹಿಂದೂ ಕಾರ್ಯಕರ್ತರ ಮೇಲೆ ಹಲ್ಲೆಗಳು ನಡೆದು ಕೋಮು ಭಾವನೆ ಕೆರಳಿಸುವ ಕೃತ್ಯ ನಡೆಯುತ್ತಿದೆ.


Provided by

ಕೆಲವೆಡೆ ಪಾಕಿಸ್ಥಾನದ ಧ್ವಜ ಹಾರಿಸುವ ಮೂಲಕ ದೇಶ ದ್ರೋಹದ ಕೆಲಸವೂ ನಡೆದಿದೆ. ಈ ಎಲ್ಲ ಪ್ರಕರಣಗಳನ್ನು ಸರಕಾರ ಗಂಭೀರವಾಗಿ ಪರಿಗಣಿಸಿ ತಪ್ಪಿತಸ್ಥರ ಮೇಲೆ ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಎಂದು ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ಡಿ.ವೇದವ್ಯಾಸ್ ಕಾಮತ್ ಆಗ್ರಹಿಸಿದ್ದಾರೆ.

ಮಂಗಳೂರಲ್ಲಿ ನಡೆದ ಪ್ರೆಸ್ ಮೀಟ್ ನಲ್ಲಿ ಮಾತನಾಡಿದ ಅವರು. ಕಾಂಗ್ರೆಸ್ ಪಕ್ಷ ಚುನಾವಣೆ ಪೂರ್ವದಲ್ಲಿ ಘೋಷಿಸಿದ `ಗ್ಯಾರೆಂಟಿ’ ಈಗಲೇ ದೊಡ್ಡ ಮಟ್ಟಿನ ಗೊಂದಲಕ್ಕೆ ಎಡೆ ಮಾಡಿದೆ. ಸರಕಾರ ಬಂದ 24 ಗಂಟೆಯಲ್ಲೇ ಗ್ಯಾರಂಟಿ ಜಾರಿ ಎಂದು ಘೋಷಿಸಿದ್ದ ಕಾಂಗ್ರೆಸ್ ಈಗ ಪೊಳ್ಳು ಭರವಸೆಗಳನ್ನು ಈಡೇರಿಸಲು ಪರದಾಡುತ್ತಿದೆ ಎಂದು ಟೀಕಿಸಿದರು.


Provided by

ಸರಕಾರ ಬಂದು ದಿನ ಹತ್ತಾದರೂ ಈ ಬಗ್ಗೆ ಯಾವುದೇ ಸ್ಪಷ್ಟತೆ ಇಲ್ಲದೆ ಅನಗತ್ಯ ವಿಳಂಬ ಮಾಡಿ ಗ್ಯಾರಂಟಿಗಳಿಗೆ ನಿಯಮ ತರಲು ಹೊರಟಿದೆ. ಬಸ್ ಗಳಲ್ಲಿ ಜನ ಟಿಕೆಟ್ ಇಲ್ಲದೆ ಪ್ರಯಾಣಿಸಿ ನಿರ್ವಾಹಕರಲ್ಲಿ ಗಲಾಟೆ ಮಾಡುತ್ತಿದ್ದಾರೆ. ವಿದ್ಯುತ್ ಬಿಲ್ ಪಾವತಿಗೂ ಜನ ಕೆಲವೆಡೆ ತಗಾದೆ ತೆಗೆದು ಮೀಟರ್ ರೀಡಿಂಗ್ಗೆ ಬಂದ ಸಿಬ್ಬಂದಿಗೆ ಹಲ್ಲೆ ನಡೆಸಿದ ಪ್ರಕರಣಗಳೂ ಅಲ್ಲಲ್ಲಿ ವರದಿಯಾಗಿವೆ. ಯಾವುದೇ ಸ್ಪಷ್ಟತೆ ಇಲ್ಲದೆ ಯೋಜನೆ ಘೋಷಿಸಿದ್ದರ ಪರಿಣಾಮ ಇದಾಗಿದೆ. ಕಾಂಗ್ರೆಸ್ ಘೋಷಿಸಿದ ಗ್ಯಾರಂಟಿ ಆರಂಭದಲ್ಲೇ ಗೊಂದಲಮಯವಾಗಿದೆ ಎಂದು ಕಾಮತ್ ಹೇಳಿದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JdaVhZJabeA0V7XQ5ZJp92

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

 

ಇತ್ತೀಚಿನ ಸುದ್ದಿ