ಕಾಂಗ್ರೆಸ್ ಮೊದಲ ಪಟ್ಟಿಯಲ್ಲಿ ಬಿಲ್ಲವರಿಗೆ ಅನ್ಯಾಯವಾಗಿದೆ: ಶ್ರೀ ಪ್ರಣವಾನಂದ ಸ್ವಾಮೀಜಿ

pranavananda
27/03/2023

ರಾಜ್ಯ ವಿಧಾನಸಭಾ ಚುನಾವಣೆಗೆ ಸಂಬಂಧಿಸಿ ಕಾಂಗ್ರೆಸ್‌ ಪಕ್ಷ ಬಿಡುಗಡೆಗೊಳಿಸಿರುವ ಮೊದಲ ಪಟ್ಟಿಯಲ್ಲಿ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳು ಸೇರಿದಂತೆ ರಾಜ್ಯದಲ್ಲಿ ಬಿಲ್ಲವ ಸಮುದಾಯದ ಟಿಕೆಟ್ ಆಕಾಂಕ್ಷಿಗಳಿಗೆ ಅನ್ಯಾಯವಾಗಿದೆ ಎಂದು ಬ್ರಹ್ಮಶ್ರೀ ನಾರಾಯಣಗುರು ಶಕ್ತಿ ಪೀಠದ ಶ್ರೀ ಪ್ರಣವಾನಂದ ಸ್ವಾಮೀಜಿ ಹೇಳಿದ್ದಾರೆ.

ಮಂಗಳೂರು ನಗರದ ಖಾಸಗಿ ಹೋಟೆಲ್‌ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಲ್ಲವ ಸಮುದಾಯದ ಹತ್ತು ಮಂದಿಗೆ ಟಿಕೆಟ್ ನೀಡುವಂತೆ ಕೇಳಿದ್ದೆವು. ಆದರೆ ಆರು ಮಂದಿಗೆ ಸಿಕ್ಕಿದೆ. ಎರಡನೇ ಪಟ್ಟಿಯಲ್ಲಿ ಉಳಿದ ನಾಲ್ಕು ಮಂದಿಗೆ ಟಿಕೆಟ್ ಸಿಗಬಹುದು ಎಂಬ ನಿರೀಕ್ಷೆಯಲ್ಲಿದ್ದೇವೆ ಎಂದರು.

ನಾವು ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳಿಗೆ ರಾಜ್ಯದಲ್ಲಿ ತಲಾ 10 ಕ್ಷೇತ್ರಗಳಲ್ಲಿ ಬಿಲ್ಲವರಿಗೆ ಸ್ಪರ್ಧಿಸಲು ಟಿಕೆಟ್ ನೀಡಬೇಕೆಂದು ಕೇಳಿದ್ದೇವು. ಕಾಂಗ್ರೆಸ್ ಮಾತ್ರ ಮೊದಲ ಹಂತದ ಪಟ್ಟಿ ಬಿಡುಗಡೆಗೊಳಿಸಿದೆ. ಒಂದು ವೇಳೆ ನಮ್ಮ ಬೇಡಿಕೆ ಈಡೇರದಿದ್ದರೆ ಮುಂದಿನ ವಿಚಾರದ ಬಗ್ಗೆ ಯೋಚಿಸಲಾಗುವುದು. ಇದು ಎಲ್ಲ ಪಕ್ಷಗಳಿಗೂ ನಮ್ಮ ಸಮುದಾಯದವರನ್ನು ಕಡೆಗಣಿಸದಂತೆ ಎಚ್ಚರಿಕೆಯ ಸಂದೇಶವಾಗಿದೆ ಎಂದು ಹೇಳಿದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ

Exit mobile version