ವಡ್ಗಾಮ್ ಕ್ಷೇತ್ರದಲ್ಲಿ ಜಿಗ್ನೇಶ್ ಮೇವಾನಿಗೆ ಭರ್ಜರಿ ಜಯ
ಗುಜರಾತ್: ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ವಡ್ಗಾಮ್ ಕ್ಷೇತ್ರದಲ್ಲಿ ಜಿಗ್ನೇಶ್ ಮೇವಾನಿ ಎರಡನೇ ಬಾರಿಗೆ ಗೆಲುವು ಸಾಧಿಸಿದ್ದಾರೆ.
ಗುಜರಾತ್ ಕಾಂಗ್ರೆಸ್ ನ ಕಾರ್ಯಾಧ್ಯಕ್ಷರಾಗಿರುವ ಜಿಗ್ನೇಶ್ ಮೇವಾನಿ 2017 ರ ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಸ್ವತಂತ್ರ ಶಾಸಕರಾಗಿ ವಡ್ಗಾಮ್ ನಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ಇದೀಗ ಅದೇ ಕ್ಷೇತ್ರದಲ್ಲಿ ಎರಡನೇ ಬಾರಿಗೆ ಭರ್ಜರಿ ಗೆಲುವು ದಾಖಲಿಸಿದ್ದಾರೆ.
ವಡ್ಗಾಮ್ ಪರಿಶಿಷ್ಟ ಜಾತಿಗಳಿಗೆ (SC) ಮೀಸಲಾದ ಸ್ಥಾನವಾಗಿದ್ದು, 90,000ದಷ್ಟು ಮುಸ್ಲಿಂ ಮತದಾರರು ಇಲ್ಲಿ ನಿರ್ಣಾಯಕ ಪಾತ್ರವನ್ನು ವಹಿಸುತ್ತಾರೆ. 44,000 ದಲಿತ ಮತದಾರರು ಕೂಡ ಈ ಕ್ಷೇತ್ರದಲ್ಲಿದ್ದಾರೆ. 15,000 ರಜಪೂತ ಮತದಾರರು ಇದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LwWxa0YtfZe3V04Rgx7ZIV
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka