ಕಾಂಗ್ರೆಸ್ ಕಾರ್ಯಕರ್ತರು ಪ್ರಯಾಣಿಸುತ್ತಿದ್ದ ಬಸ್ ಅಪಘಾತ | ಐದು ಮಂದಿಯ ದಾರುಣ ಸಾವು
ಚಂಢೀಗಡ: ಕಾಂಗ್ರೆಸ್ ಕಾರ್ಯಕರ್ತರು ಪ್ರಯಾಣಿಸುತ್ತಿದ್ದ ಖಾಸಗಿ ಬಸ್ಸೊಂದು ಅಪಘಾತಕ್ಕೀಡಾದ ಪರಿಣಾಮ ಐವರು ಸಾವನ್ನಪ್ಪಿ 30ಕ್ಕೂ ಅಧಿಕ ಮಂದಿ ಗಾಯಗೊಂಡಿರುವ ಘಟನೆ ಪಂಜಾಬ್ ನ ಮೊಗ ಜಿಲ್ಲೆಯಲ್ಲಿ ಇಂದು ಬೆಳಿಗ್ಗೆ ನಡೆದಿದೆ.
ಚಂಢೀಗಡ ನ ಪಂಜಾಬ್ ಕಾಂಗ್ರೆಸ್ ಭವನದಲ್ಲಿ ನಡೆಯುತ್ತಿದ್ದ ಪಂಜಾಬ್ ಪ್ರದೇಶ ಕಾಂಗ್ರೆಸ್ ಕಮಿಟಿಗೆ ನವಜೋತ್ ಸಿದ್ದು ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸುವ ಸಮಾರಂಭದಲ್ಲಿ ಪಾಲ್ಗೊಳ್ಳಲು ಕಾರ್ಯಕರ್ತರು ತೆರಳುತ್ತಿದ್ದ ವೇಳೆ ಬಸ್ ಗಳು ಮುಖಾಮುಖಿಯಾಗಿ ಡಿಕ್ಕಿಯಾಗಿದ್ದು, ಪರಿಣಾಮವಾಗಿ ಎರಡೂ ಬಸ್ ಗಳ ಚಾಲಕರು ಸೇರಿದಂತೆ 5 ಮಂದಿ ಸಾವನ್ನಪ್ಪಿದ್ದಾರೆ ಎಂದು ಎಸ್ ಎಸ್‍ಪಿ ಹರ್ಮಾನ್ ಬೀರ್ ತಿಳಿಸಿದ್ದಾರೆ.
ಇನ್ನೂ ಘಟನೆಯಲ್ಲಿ ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ. ಘಟನೆಗೆ ಸಂಬಂಧಿಸಿದಂತೆ ಗುಜರಾತ್ ಸಿಎಂ ಅಮರಿಂದರ್ ಸಿಂಗ್ ಸಂತಾಪ ಸೂಚಿಸಿದ್ದಾರೆ. ಪಂಜಾಬ್ ಕಾಂಗ್ರೆಸ್ ಘಟಕ ಕೂಡ ಸಂತಾಪ ಸೂಚಿಸಿದೆ. ಇಂದು ನವಜೋತ್ ಸಿದ್ದು ಪಂಜಾಬ್ ಕಾಂಗ್ರೆಸ್‍ನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ್ದಾರೆ. ಈ ಹಿಂದೆ ಪಂಜಾಬ್ ಘಟಕಕ್ಕೆ ಸುನೀಲ್ ಜಾಖರ್ ಅಧ್ಯಕ್ಷರಾಗಿದ್ದರು.
ಇನ್ನಷ್ಟು ಸುದ್ದಿಗಳು…
ಚೈತ್ರಾ ಕೋಟೂರ್ ಸನ್ಯಾಸಿನಿ ಆಗಿದ್ದು ನಿಜವೇ? | ಅಸಲಿಗೆ ನಡೆದದ್ದೇನು?
ಜೀನ್ಸ್ ಪ್ಯಾಂಟ್ ಧರಿಸಿದ್ದಕ್ಕೆ 16 ವರ್ಷದ ಬಾಲಕಿಯನ್ನು ಕೊಂದರು!
ಬಿಜೆಪಿಗೆ ರಾಜೀನಾಮೆ ಪರ್ವ ಆರಂಭವಾಗುತ್ತಾ? | 2ನೇ ಅಸ್ತ್ರ ಪ್ರಯೋಗಕ್ಕೆ ಸಜ್ಜು!
ಅಶ್ಲೀಲ ಚಿತ್ರಗಳ ವ್ಯಾಪಾರದಿಂದ ರಾಜ್ ಕುಂದ್ರಾಗೆ ದಿನವೊಂದಕ್ಕೆ ಬರುತ್ತಿದ್ದ ಆದಾಯ ಎಷ್ಟು ಲಕ್ಷ ಗೊತ್ತಾ?
ಯಡಿಯೂರಪ್ಪರನ್ನು ಮುಖ್ಯಮಂತ್ರಿ ಸ್ಥಾನದಿಂದ ಬದಲಿಸುವುದು ಸೂಕ್ತವಲ್ಲ | ಎನ್.ಮಹೇಶ್