ಪಶ್ಚಿಮ ಬಂಗಾಳ ಪಂಚಾಯತ್ ಚುನಾವಣೆಗೂ ಮುನ್ನ ಕಾಂಗ್ರೆಸ್ ಎಡಪಕ್ಷಗಳ ಮೈತ್ರಿ
ಪಶ್ಚಿಮ ಬಂಗಾಳದಲ್ಲಿ ಮುಂಬರುವ ಪಂಚಾಯತ್ ಚುನಾವಣೆಯಲ್ಲಿ ಸಿಪಿಐ (ಎಂ) ಜೊತೆ ಮೈತ್ರಿ ಮಾಡಿಕೊಂಡು ಸ್ಪರ್ಧಿಸುವುದಾಗಿ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಶುಕ್ರವಾರ ಘೋಷಿಸಿದ್ದಾರೆ.
ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಚೌಧರಿ, ಜುಲೈ 8 ರ ಚುನಾವಣೆಯನ್ನು ಎದುರಿಸಲು ಸಿಪಿಐ (ಎಂ) ಗೆ ಎಲ್ಲಾ ಸಹಕಾರವನ್ನು ನೀಡುವಂತೆ ಕಾಂಗ್ರೆಸ್ ಕಾರ್ಯಕರ್ತರಿಗೆ ನಿರ್ದೇಶನ ನೀಡಿದ್ದೇನೆ ಎಂದು ಹೇಳಿದರು.
ಪಂಚಾಯತ್ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಸಿಪಿಐ (ಎಂ) ಒಟ್ಟಾಗಿ ಹೋರಾಡಲಿವೆ. ಈ ನಿಟ್ಟಿನಲ್ಲಿ ಸಿಪಿಐ (ಎಂ) ಗೆ ಎಲ್ಲಾ ರೀತಿಯ ಬೆಂಬಲವನ್ನು ನೀಡುವಂತೆ ನಾವು ಈಗಾಗಲೇ ನಮ್ಮ ಪಕ್ಷದ ಕಾರ್ಯಕರ್ತರಿಗೆ ನಿರ್ದೇಶನ ನೀಡಿದ್ದೇವೆ ಎಂದು ಅವರು ಹೇಳಿದರು.
ಸಿಪಿಐ(ಎಂ) ನೇತೃತ್ವದ ಎಡರಂಗ ಮತ್ತು ಕಾಂಗ್ರೆಸ್ ಪಕ್ಷವು ಪಶ್ಚಿಮ ಬಂಗಾಳದಲ್ಲಿ 2016 ಮತ್ತು 2021 ರ ವಿಧಾನಸಭಾ ಚುನಾವಣೆಗಳನ್ನು ಒಟ್ಟಿಗೆ ಎದುರಿಸಿದ್ದವು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw