ಕಾಂಗ್ರೆಸ್ ನವರು ಚಳುವಳಿ ಮಾಡುವಷ್ಟರ ಮಟ್ಟಿಗೆ ಬೆಲೆ ಏರಿಕೆಯಾಗಿಲ್ಲ | ಸಿ.ಟಿ.ರವಿ ಹೇಳಿಕೆ - Mahanayaka

ಕಾಂಗ್ರೆಸ್ ನವರು ಚಳುವಳಿ ಮಾಡುವಷ್ಟರ ಮಟ್ಟಿಗೆ ಬೆಲೆ ಏರಿಕೆಯಾಗಿಲ್ಲ | ಸಿ.ಟಿ.ರವಿ ಹೇಳಿಕೆ

c t ravi
05/09/2021

ಚಿಕ್ಕಮಗಳೂರು:  ಕಾಂಗ್ರೆಸ್ ನವರು ಚಳುವಳಿ ಮಾಡುವಷ್ಟರ ಮಟ್ಟಿಗೆ ಬೆಲೆ ಏರಿಕೆಯಾಗಿಲ್ಲ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದ್ದು,  ಕಾಂಗ್ರೆಸ್ ನವರು ಅಧಿಕಾರ ಬಿಟ್ಟು ಹೋಗುವಾಗ ಗ್ಯಾಸ್ ಬೆಲೆಯು 981 ರೂಪಾಯಿ ಇತ್ತು ಎಂದು ಅವರು ಹೇಳಿದ್ದಾರೆ.

ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಕೊವಿಡ್ ನಿಂದಾಗಿ ಜಗತ್ತು ಆರ್ಥಿಕ ಏರಿಳಿತವನ್ನು ಎದುರಿಸುತ್ತಿದೆ. ಇದೀಗ ದೇಶದಲ್ಲಿ ಆಗಿರುವ ಬೆಲೆ ಏರಿಕೆಯು ತಾತ್ಕಾಲಿಕವಾಗಿದೆ.  ಈ ಹಿಂದೆ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರದ ಕಾರಣದಿಂದ ಬೆಲೆ ಏರಿಕೆಯಾಗಿತ್ತು ಎಂದು ಅವರು ಆರೋಪಿಸಿದರು.

20 ತಿಂಗಳುಗಳ ಕಾಲ ಗರೀಬಿ ಕಲ್ಯಾಣ್ ಯೋಜನೆಯಡಿಯಲ್ಲಿ ಧವಸ ಧಾನ್ಯಗಳನ್ನು ಉಚಿತವಾಗಿ ನೀಡುತ್ತಿರುವ ಏಕೈಕ ರಾಷ್ಟ್ರ ಭಾರತ. ನೂರು ಕೋಟಿ ಜನರಿಗೆ ಲಸಿಕೆ ನೀಡುತ್ತಿರುವ ಏಕೈಕ ರಾಷ್ಟ್ರ ಭಾರತ ಎಂದು ಅವರು ಭಾರತದಲ್ಲಿ ದಿನದಿಂದ ದಿನಕ್ಕೆ ಜನರ ಪ್ರಾಣವನ್ನು ಹಿಂಡುತ್ತಿರುವ ಬೆಲೆಯೇರಿಕೆಯನ್ನು ಸಮರ್ಥಿಸಿಕೊಂಡರು.

ಇನ್ನಷ್ಟು ಸುದ್ದಿಗಳು…

ಗಣೇಶೋತ್ಸವಕ್ಕೆ ಷರತ್ತು ಬದ್ಧ ಅವಕಾಶ | ಸಂಘಟಕರು ಈ ನಿಯಮಗಳನ್ನು ಪಾಲಿಸಲೇ ಬೇಕು!

ದೆಹಲಿ ಪೊಲೀಸ್ ಸಬಿಯಾ ಸೈಫಿ ಸಾಮೂಹಿಕ ಅತ್ಯಾಚಾರ, ಬರ್ಬರ ಹತ್ಯೆ | 50 ಬಾರಿ ಚುಚ್ಚಿದರು, ಅಂಗಾಂಗ ಕತ್ತರಿಸಿದರು!

ತಡರಾತ್ರಿ ಫೋನ್ ನಲ್ಲಿ ಮಾತನಾಡಿದ್ದಕ್ಕೆ ಪತ್ನಿಯನ್ನು ಗುಂಡಿಟ್ಟು ಕೊಂದ ಪತಿ!

ಹಾರ, ತುರಾಯಿ ಸನ್ಮಾನ ಪಡೆದ ಸಿಎಂ ಬಸವರಾಜ್ ಬೊಮ್ಮಾಯಿ! | ಆದೇಶ ಪಾಲಿಸಬೇಕಾದವರು ಯಾರು?

ಬೈಕು, ಟಿವಿ, ಫ್ರಿಡ್ಜ್ ಹೊಂದಿದವರ ಪಡಿತರ ಚೀಟಿ ರದ್ದಾಗುವುದೇ? | ಕೊನೆಗೂ ಸ್ಪಷ್ಟನೆ ನೀಡಿದ ಇಲಾಖೆ

ಕುಟುಂಬ ಸಂಘಟನೆಯ ಬದಲು ಪಕ್ಷ ಸಂಘಟನೆ ಧ್ಯೇಯವಾಗಿರಲಿ  | ಬಿ.ವೈ.ವಿಜಯೇಂದ್ರಗೆ ಯತ್ನಾಳ್ ಟಾಂಗ್

ಇತ್ತೀಚಿನ ಸುದ್ದಿ