ಕಾಂಗ್ರೆಸ್ ನವರು ಕುಡುಕ ಸೂ*** ಮಕ್ಕಳು ಎಂದು ಹೇಳಿಕೆ ನೀಡಿದ ಸಚಿವ ಈಶ್ವರಪ್ಪ - Mahanayaka

ಕಾಂಗ್ರೆಸ್ ನವರು ಕುಡುಕ ಸೂ*** ಮಕ್ಕಳು ಎಂದು ಹೇಳಿಕೆ ನೀಡಿದ ಸಚಿವ ಈಶ್ವರಪ್ಪ

eshwarappa
10/08/2021

ಬೆಂಗಳೂರು: ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸುವ ಭರದಲ್ಲಿ ಕಾಂಗ್ರೆಸ್ ನವರು ಕುಡುಕ ಸೂ*** ಮಕ್ಕಳು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರಪ್ಪನವರು ಹೇಳಿಕೆ ನೀಡಿದ್ದು, ಇದೀಗ ಮತ್ತೊಮ್ಮೆ ವಿವಾದವನ್ನು ಸೃಷ್ಟಿಸಿದ್ದಾರೆ. ಮೊನ್ನೆಯಷ್ಟೇ “ಒಂದಕ್ಕೆ ಎರಡು ತೆಗೆಯುತ್ತೇವೆ” ಎಂದು ವಿವಾದ ಸೃಷ್ಟಿಸಿದ್ದ ಈಶ್ವರಪ್ಪನವರು ಇದೀಗ ಮತ್ತೊಮ್ಮೆ ವಿವಾದಕ್ಕೆ ಕಾರಣವಾಗಿದ್ದಾರೆ.

ಈಶ್ವರಪ್ಪನವರು ಹೆಸರು ಬದಲಾಯಿಸಿಕೊಳ್ಳಲಿ ಎಂಬ ಕಾಂಗ್ರೆಸ್ ನಾಯಕರ ಹೇಳಿಕೆಗೆ ಆಕ್ರೋಶ ವ್ಯಕ್ತಪಡಿಸಿ ತಿರುಗೇಟು ನೀಡುತ್ತಿದ್ದ ಈಶ್ವರಪ್ಪನವರು, ಕಾಂಗ್ರೆಸ್ ನವರು ಕುಡುಕ ಸೂ*** ಮಕ್ಕಳು ಎಂದು ಹೇಳಿದ್ದಾರೆ ಎಂದು ವರದಿಯಾಗಿದೆ.

ಇನ್ನೂ ಈಶ್ವರಪ್ಪನವರ ಹೇಳಿಕೆಗೆ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದು, ಈಶ್ವರಪ್ಪನಿಗೆ ಸಂಸ್ಕೃತಿ, ಸಂಸ್ಕಾರ ಇಲ್ಲ. ಅವರು ಬಂದಿರುವ ದಾರಿಯೇ ಅಂತಹದ್ದು. ಅವರಿಂದ ಒಳ್ಳೆಯದ್ದನ್ನು ನಿರೀಕ್ಷಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ನಾನು ಸರ್ಕಾರದಲ್ಲಿದ್ದೇನೆ, ಮಂತ್ರಿಯಾಗಿದ್ದೇನೆ ಎನ್ನುವ ಜವಾಬ್ದಾರಿ ಈಶ್ವರಪ್ಪನವರಿಗೆ ಇಲ್ಲ ಎಂದು ಅವರು ಹೇಳಿದರು.

ಇನ್ನಷ್ಟು ಸುದ್ದಿಗಳು…

ಒಂದಕ್ಕೆ ಎರಡು ತೆಗೆದು ಬಿಡಿ ಅನ್ನೋವಷ್ಟು ಬಿಜೆಪಿ ಬೆಳೆದಿದೆ |  ಸಚಿವ ಕೆ.ಎಸ್.ಈಶ್ವರಪ್ಪ

ಹೂಗುಚ್ಛ, ಹಾರ ಸಂಪ್ರದಾಯಕ್ಕೆ ಬ್ರೇಕ್ ಹಾಕಿದ ಸಿಎಂ ಬೊಮ್ಮಾಯಿ | ಕನ್ನಡ ಪುಸ್ತಕ ಕೊಡಲು ಆದೇಶ

ಮೊಘಲರ ಆಳ್ವಿಕೆಯ 600 ವರ್ಷಗಳ ಕಾಲ ಪ್ರಮುಖ ಹುದ್ದೆ ಅಲಂಕರಿಸಿದ್ದವರು ಬ್ರಾಹ್ಮಣರು | ಸಿದ್ದರಾಮಯ್ಯ

ಕರಾಟೆ ಬೆಲ್ಟ್ ನಿಂದ ತಾಯಿಯ ಕತ್ತು ಹಿಸುಕಿ ಕೊಂದ ಬಾಲಕಿ!

SSLC Exam result 2021 | ಓರ್ವ ವಿದ್ಯಾರ್ಥಿಯನ್ನು ಹೊರತುಪಡಿಸಿ, ಎಲ್ಲರೂ ಪಾಸ್

 

ಇತ್ತೀಚಿನ ಸುದ್ದಿ