ಉಡುಪಿ: ಕನ್ನರಪಾಡಿ- ಇಂದ್ರಾಳಿ ಕಾಂಗ್ರೆಸ್ ಪಾದಯಾತ್ರೆಗೆ ಚಾಲನೆ - Mahanayaka

ಉಡುಪಿ: ಕನ್ನರಪಾಡಿ- ಇಂದ್ರಾಳಿ ಕಾಂಗ್ರೆಸ್ ಪಾದಯಾತ್ರೆಗೆ ಚಾಲನೆ

udupi congress
06/08/2022

ಉಡುಪಿ: ದೇಶದ 75ನೇ ಸ್ವಾತಂತ್ರೋತ್ಸವದ ಅಮೃತಮಹೋತ್ಸವದ ಅಂಗವಾಗಿ ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿ ನೇತೃತ್ವದಲ್ಲಿ ಉಡುಪಿ  ಬ್ಲಾಕ್ ಕಾಂಗ್ರೆಸ್ ವತಿಯಿಂದ ಉಡುಪಿ ವಿಧಾನಸಭಾ ಕ್ಷೇತ್ರದ ಕಿನ್ನಿಮೂಲ್ಕಿ ಕನ್ನರ್ಪಾಡಿ ದೇವಸ್ಥಾನದಿಂದ ಇಂದ್ರಾಳಿ ವರೆಗೆ ಹಮ್ಮಿಕೊಳ್ಳಲಾದ ಪಾದಯಾತ್ರೆಗೆ ಶನಿವಾರ ಬೆಳಿಗ್ಗೆ ಚಾಲನೆ ನೀಡಲಾಯಿತು.


Provided by

ಕನ್ನರಪಾಡಿಯಿಂದ  ಹೊರಟ ಪಾದಯಾತ್ರೆಯು ಕಿನ್ನಿಮೂಲ್ಕಿ ಜೋಡುಗಟ್ಟೆ ಕೆ ಎಂ ಮಾರ್ಗ ಸರ್ವಿಸ್ ಬಸ್ ನಿಲ್ದಾಣ ಸಿಟಿ ಬಸ್ ನಿಲ್ದಾಣ ಕಡಿಯಾಳಿ ಮೂಲಕ ಇಂದ್ರಾಳಿಯಲ್ಲಿ ಸಮಾಪ್ತಿ ಗೊಳ್ಳಲಿದೆ

ಪಾದಯಾತ್ರೆಯಲ್ಲಿ ಮಾಜಿ ಸಚಿವ ವಿನಯ ಕುಮಾರ್ ಸೊರಕೆ, ವಿಧಾನ ಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಮುಖಂಡರಾದ ಎಂ.ಎ.ಗಫೂರು, ವರೋನಿಕಾ ಕರ್ನೆಲಿಯೋ, ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್, ಪ್ರಖ್ಯಾತ್ ಶೆಟ್ಟಿ, ಶಬ್ಬೀರ್ ಉಡುಪಿ, ತಾರನಾಥ್  ಕೋಟ್ಯಾನ್, ಸುಕನ್ಯ ಪೂಜಾರಿ, ಮಾಧವ ಬನ್ನಂಜೆ,  ದಿನೇಶ್ ಪುತ್ರನ್, ಉದ್ಯಾವರ ನಾಗೇಶ್ ಕುಮಾರ್, ಲೂಯಿಸ್ ಲೋಬೊ, ಕೀರ್ತಿ ಶೆಟ್ಟಿ, ಭಾಸ್ಕರ್ ರಾವ್ ಕಿದಿಯೂರು, ದೀಪಕ್ ಕೋಟ್ಯಾನ್, ಅಣ್ಣಯ್ಯ ಶೇರಿಗಾರ್, ದಿನಕರ ಹೇರೂರು, ಗಣೇಶ್ ನೆರ್ಗಿ, ಹರೀಶ್ ಶೆಟ್ಟಿ ಪಾಂಗಳ, ಶಶಿಧರ್ ಶೆಟ್ಟಿ ಎರ್ಮಾಳ್  ಮೊದಲಾದವರು ಉಪಸ್ಥಿತರಿದ್ದರು.


Provided by

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IaxQSuNxGHREVEoloSpDOO

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ