ಗುಜರಾತ್ ಮಾದರಿ ಅಂದ್ರೆ 4 ಲಕ್ಷ ಕೊವಿಡ್ ಸಾವು: ಬಿಜೆಪಿ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ಕಿಡಿ
ಅಹಮದಾಬಾದ್: ಗುಜರಾತ್ ಮಾದರಿ ಅಂದ್ರೆ 4 ಲಕ್ಷ ಕೊವಿಡ್ ಸಾವುಗಳು ಎಂದು ಕೇಂದ್ರ ಸರ್ಕಾರವನ್ನು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಚುಚ್ಚಿದ್ದು, ಬಿಜೆಪಿಯು 6 ವರ್ಷಗಳಲ್ಲಿ ಮೂರು ಸಿಎಂಗಳನ್ನು ಬದಲಿಸಿದೆ. ಇದರ ಅರ್ಥ ಸಿಎಂಗಳು ಕೆಲಸ ಮಾಡಿಲ್ಲ ಎಂದು ಅವರು ಹೇಳಿದ್ದಾರೆ.
ಕಾಂಗ್ರೆಸ್ ವೋಟ್ ಬ್ಯಾಂಕ್ ರಾಜಕಾರಣ ಮಾಡುತ್ತಿದೆ ಎಂಬ ಪ್ರಧಾನಿ ನರೇಂದ್ರ ಮೋದಿ ಆರೋಪಕ್ಕೆ ಪ್ರತಿಕ್ರಿಯಿಸಿದ ಖರ್ಗೆ, ಭಯೋತ್ಪಾದನೆ ವಿರುದ್ಧದ ಹೋರಾಟದಲ್ಲಿ ತಮ್ಮ ಪಕ್ಷ ಇಬ್ಬರು ಪ್ರಧಾನಿಗಳನ್ನು ಕಳೆದುಕೊಂಡಿದೆ ಎಂದು ತಿರುಗೇಟು ನೀಡಿದರು.
ಭಾರತೀಯ ಜನತಾ ಪಕ್ಷದ ಯಾವುದೇ ನಾಯಕರು ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ್ದಾರೆಯೇ ? ಎಂದು ಪ್ರಶ್ನಿಸಿದ ಖರ್ಗೆ, ಭಯೋತ್ಪಾದಕರ ವಿರುದ್ಧ ಹೋರಾಡುವ ಕೆಲಸವನ್ನು ನಾವು ಮಾಡಿದ್ದೇವೆ, ದೇಶದಲ್ಲಿ ಶಾಂತಿ ಕಾಪಾಡಲು ನಮ್ಮ ನಾಯಕರು ಪ್ರಾಣ ತ್ಯಾಗ ಮಾಡಿದ್ದಾರೆ ಎಂದಿದ್ದಾರೆ.
ದೇಶವನ್ನು ಬಲಪಡಿಸಲು ಮತ್ತು ಒಗ್ಗೂಡಿಸಲು ಕಾಂಗ್ರೆಸ್ ಇಬ್ಬರು ಪ್ರಸಿದ್ಧ ಮತ್ತು ವಿಶ್ವ ಗೌರವಾನ್ವಿತ ಪ್ರಧಾನಿಗಳನ್ನು ಕಳೆದುಕೊಂಡಿದೆ. ಆದರೆ ಇದು ರಾಜ್ಯ ವಿಧಾನಸಭೆಯ ಚುನಾವಣೆಯಾಗಿದೆ ಮತ್ತು ಸಂಸತ್ತಿನ ಚುನಾವಣೆಯಲ್ಲ. ರಾಜ್ಯವನ್ನು ಬಾಧಿಸುವ ಸಮಸ್ಯೆಗಳೊಂದಿಗೆ ನಾವು ನಿಮ್ಮ ಮುಂದೆ ಬಂದಿದ್ದೇವೆ ಎಂದಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka