ಉಡುಪಿ: ಅಕ್ಕಿಯ ವಿಚಾರದಲ್ಲಿ ರಾಜಕೀಯ ಮಾಡುತ್ತಿರುವ ಕೇಂದ್ರ ಸರಕಾರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

ಉಡುಪಿ: ಬಡವರಿಗೆ ನೀಡುವ ಅಕ್ಕಿಯ ವಿಷಯದಲ್ಲಿ ರಾಜಕೀಯ ಮಾಡುತ್ತಿರುವ ಕೇಂದ್ರ ಬಿಜೆಪಿ ಸರಕಾರದ ವಿರುದ್ಧ ಉಡುಪಿ ಜಿಲ್ಲಾ ಕಾಂಗ್ರೆಸ್ ನೇತೃತ್ವದಲ್ಲಿ ಮಂಗಳವಾರ ಉಡುಪಿ ಬ್ರಹ್ಮಗಿರಿ ಸರ್ಕಲ್ ನಲ್ಲಿ ಪ್ರತಿಭಟನೆ ನಡೆಸಲಾಯಿತು.
ಪ್ರತಿಭಟನಾ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಮಾಜಿ ಸಚಿವ ವಿನಯಕುಮಾರ್ ಸೊರಕೆ, ಕೇಂದ್ರ ಸರಕಾರ ರಾಜ್ಯಕ್ಕೆ ಅಕ್ಕಿ ನೀಡದೆ ಮಲತಾಯಿ ಧೋರಣೆ ಅನುಸರಿಸುತ್ತಿದೆ. ಇವರಿಗೆ ಲಕ್ಷಾಂತರ ಮೆಟ್ರಿಕ್ ಟನ್ ಅಕ್ಕಿಯನ್ನು ತಾಲಿಬಾನ್ ಸರಕಾರಕ್ಕೆ ನೀಡುವ ಕೇಂದ್ರಕ್ಕೆ ಕರ್ನಾಟಕ ರಾಜ್ಯದ ಬಡವರಿಗೆ ನೀಡುವ ಅಕ್ಕಿ ಇಲ್ಲ. ಇದು ಅನ್ನ ಭಾಗ್ಯ ಯೋಜನೆಯನ್ನು ತಡೆಯುವ ಷಡ್ಯಂತರ ಎಂದು ಆರೋಪಿಸಿದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಮಾತನಾಡಿದರು. ಪ್ರತಿಭಟನೆಯಲ್ಲಿ ಕಾಂಗ್ರೆಸ್ ಮುಖಂಡರಾದ ಪ್ರಸಾದ್ ರಾಜ್ ಕಾಂಚನ್, ದಿನೇಶ್ ಹೆಗ್ಡೆ ಮೊಳಹಳ್ಳಿ, ಉದಯ ಕುಮಾರ್ ಶೆಟ್ಟಿ ಮುನಿಯಾಲು, ರಮೇಶ್ ಕಾಂಚನ್, ಕಿಶನ್ ಹೆಗ್ಡೆ ಕೊಳ್ಕೆಬೈಲು, ನರಸಿಂಹ ಮೂರ್ತಿ, ಭಾಸ್ಕರ ರಾವ್ ಕಿದಿಯೂರು, ಅಣ್ಣಯ್ಯ ಶೇರಿಗಾರ್, ಇಸ್ಮಾಯಿಲ್ ಆತ್ರಾಡಿ, ಶಬ್ಬೀರ್ ಅಹ್ಮದ್ ಮೊದಲಾದವರು ಉಪಸ್ಥಿತರಿದ್ದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/D73015iu7jn2glm2MECosd
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw