ಡಿಕೆಶಿ-ಸಿದ್ದರಾಮಯ್ಯ ಆಪ್ತತೆಯ ವಿಡಿಯೋ ಬಿಡುಗಡೆ ಮಾಡಿದ ಕಾಂಗ್ರೆಸ್ - Mahanayaka

ಡಿಕೆಶಿ–ಸಿದ್ದರಾಮಯ್ಯ ಆಪ್ತತೆಯ ವಿಡಿಯೋ ಬಿಡುಗಡೆ ಮಾಡಿದ ಕಾಂಗ್ರೆಸ್

siddaramaiha dk shivakumar
08/05/2023

ಬೆಂಗಳೂರು: ಸಿದ್ದರಾಮಯ್ಯ ಹಾಗೂ ಡಿಕೆ.ಶಿವಕುಮಾರ್ ಇಬ್ಬರೂ ಕಾಂಗ್ರೆಸ್‌ನಿಂದ ಮುಖ್ಯಮಂತ್ರಿ ರೇಸ್ ನಲ್ಲಿದ್ದು, ಇಬ್ಬರ ನಡುವೆ ವೈಮನಸ್ಸಿನ ಸುದ್ದಿಯನ್ನು ಹೊಡೆದೋಡಿಸಲು ಕಾಂಗ್ರೆಸ್ ಡಿಕೆಶಿ- ಸಿದ್ದರಾಮಯ್ಯ ಆಪ್ತತೆಯ ವಿಡಿಯೋ  ಬಿಡುಗಡೆ ಮಾಡಿದೆ.

ವದಂತಿಗಳನ್ನು ತಳ್ಳಿಹಾಕುತ್ತಲೇ ಬಂದಿರುವ ಕಾಂಗ್ರೆಸ್, ಮತ್ತೊಮ್ಮೆ ಇಬ್ಬರ ನಡುವೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ ಎಂದು ಬಿಂಬಿಸುವ ವಿಡಿಯೋವೊಂದನ್ನು ಭಾನುವಾರ  ಬಿಡುಗಡೆ ಮಾಡಿದೆ.

ಚುನಾವಣಾ ಪ್ರಚಾರದ ಭರಾಟೆಯ ನಡುವೆಯೇ ಇಬ್ಬರೂ ನಾಯಕರು ಕುಳಿತು ಲೋಕಾಭಿರಾಮವಾಗಿ, ಆತ್ಮೀಯವಾಗಿ ಮತ್ತು ವೈಯಕ್ತಿಕ ವಿಚಾರಗಳನ್ನೂ ಮಾತನಾಡಿರುವ ವಿಡಿಯೋ ಇದಾಗಿದ್ದು, ಇಬ್ಬರೂ ನಾಯಕರು ಪರಸ್ಪರ ಮಾತನಾಡಿರುವುದು, ಪ್ರಶ್ನೆಗಳನ್ನು ಕೇಳುತ್ತಾ ಮನಬಿಚ್ಚಿ ಮಾತನಾಡಿರುವುದು ವಿಡಿಯೋದಲ್ಲಿ  ಕಂಡು ಬಂದಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR

ಯೂಟ್ಯೂಬ್ ಚಾನೆಲ್ ಸಬ್ಸ್ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ