ಕಾಂಗ್ರೆಸ್ ನ ಹಿರಿಯ ನಾಯಕ ಆಸ್ಕರ್ ಫೆರ್ನಾಂಡಿಸ್ ನಿಧನ - Mahanayaka
10:08 AM Saturday 14 - December 2024

ಕಾಂಗ್ರೆಸ್ ನ ಹಿರಿಯ ನಾಯಕ ಆಸ್ಕರ್ ಫೆರ್ನಾಂಡಿಸ್ ನಿಧನ

oscar fernandes
13/09/2021

ಉಡುಪಿ:  ಮಾಜಿ ಕೇಂದ್ರ ಸಚಿವ, ಹಿರಿಯ ಕಾಂಗ್ರೆಸ್ ಮುಖಂಡ ರಾಜ್ಯಸಭಾ ಸದಸ್ಯ 80 ವರ್ಷ ವಯಸ್ಸಿನ ಆಸ್ಕರ್ ಫೆರ್ನಾಂಡಿಸ್ ಅವರು ಸೋಮವಾರ ಮಧ್ಯಾಹ್ನ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಯೋಗ ಮಾಡುತ್ತಿದ್ದ ವೇಳೆ ಆಯ ತಪ್ಪಿ ಬಿದ್ದಿದ್ದ ಆಸ್ಕರ್ ಫೆರ್ನಾಂಡಿಸ್ ಅವರು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅವರಿಗೆ ಶಸ್ತ್ರ ಚಿಕಿತ್ಸೆ ನೀಡಲಾಗಿತ್ತು. ಆದರೆ, ಅವರ ಆರೋಗ್ಯದಲ್ಲಿ ಯಾವುದೇ ಬದಲಾವಣೆಗಳಾಗಿರಲಿಲ್ಲ. ಹಲವು ಕಾಂಗ್ರೆಸ್ ಮುಖಂಡರು, ಆಸ್ಪತ್ರೆಗೆ ಭೇಟಿ ನೀಡಿ, ಕುಟುಂಬಸ್ಥರಿಗೆ ಧೈರ್ಯ ಹೇಳಿದ್ದರು. ಆದರೆ ಆಸ್ಕರ್ ಫೆರ್ನಾಂಡಿಸ್ ಅವರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರ ನಿಕಟವರ್ತಿಗಳಲ್ಲಿ ಒಬ್ಬರಾಗಿದ್ದ  ಆಸ್ಕರ್ ಫೆರ್ನಾಂಡಿಸ್ ಅವರು, ಕಾಂಗ್ರೆಸ್ ಗಾಗಿ ನಿರಂತರವಾಗಿ ದುಡಿದಿದ್ದರು. ಅವರು ಪತ್ನಿ ಬ್ಲೋಸಮ್ ಫೆರ್ನಾಂಡಿಸ್, ಪುತ್ರ ಹಾಗೂ ಪುತ್ರಿ ಹಾಗೂ ಅಪಾರ ಬಂಧುಗಳಗವನ್ನು ಅಗಲಿದ್ದಾರೆ.

ಆಸ್ಪತ್ರೆಗೆ ದಾಖಲಾದ ಬಳಿಕ ಅವರಿಗೆ ಚಿಕಿತ್ಸೆ ನೀಡಲಾಗಿತ್ತು. ಅವರು ಚೇತರಿಸಿಕೊಳ್ಳುತ್ತಾರೆ ಎಂದೇ ಕಾರ್ಯಕರ್ತರು ನಿರೀಕ್ಷಿಸಿದ್ದರು. ಆದರೆ ಎಲ್ಲರ ನಿರೀಕ್ಷೆಯೂ ಸುಳ್ಳಾಗಿದ್ದು, ಆಸ್ಕರ್ ಫೆರ್ನಾಂಡಿಸ್ ಅವರು ಇದೀಗ ನಿಧನರಾಗಿದ್ದಾರೆ ಎನ್ನುವ ಸುದ್ದಿಯು ಅಭಿಮಾನಿಗಳಲ್ಲಿ ದುಃಖವನ್ನುಂಟು ಮಾಡಿದೆ.

ಇನ್ನಷ್ಟು ಸುದ್ದಿಗಳು…

ಪ್ರಾಣ ಸ್ನೇಹಿತರು ಜೊತೆಯಾಗಿ ಪ್ರಾಣ ಬಿಟ್ಟರು: ಕೃಷಿ ಹೊಂಡದಲ್ಲಿ ಈಜಲು ಹೋಗಿದ್ದು ಪ್ರಾಣಕ್ಕೆ ಕುತ್ತು ತಂದಿತು!

ಜಾತಿ ಜನಗಣತಿ ಸಮೀಕ್ಷೆಯನ್ನು ಕೊಂದದ್ದು ಸಿದ್ದರಾಮಯ್ಯ, ಹೂತದ್ದು ಡಿ.ಕೆ.ಶಿವಕುಮಾರ್ | ಕೆ.ಎಸ್.ಈಶ್ವರಪ್ಪ

ವಿಧಾನಸೌಧಕ್ಕೆ ಎತ್ತಿನಗಾಡಿಯಲ್ಲಿ ಬಂದ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್

ಅಡಿಕೆ ಬೇಯಿಸುವ ಹಂಡೆಗೆ ಬಿದ್ದು ನಾಲ್ಕು ವರ್ಷ ವಯಸ್ಸಿನ ಬಾಲಕನ ದಾರುಣ ಸಾವು!

ಮಹಿಳೆಯನ್ನು ಬೆತ್ತಲೆಗೊಳಿಸಿ ಥಳಿಸಿ, ಅಂಗಾಂಗ ಮುಟ್ಟಿ ವಿಕೃತವಾಗಿ ಥಳಿಸಿದ ತಂಡ: ವಿಡಿಯೋ ವೈರಲ್

ಸಂಸದ ಪ್ರತಾಪ್ ಸಿಂಹ ಅವರ ಕಚೇರಿ ಮುಂದೆ ಬಳೆ ಇಟ್ಟು, ಯುವ ಕಾಂಗ್ರೆಸ್ ನಿಂದ ಪ್ರತಿಭಟನೆ

ಇತ್ತೀಚಿನ ಸುದ್ದಿ