ಎಚ್ಚೆತ್ತುಕೊಂಡ ನಮ್ಮ ಮೆಟ್ರೋ: ಪ್ರತಿ ಮೆಟ್ರೋ ನಿಲ್ದಾಣದಲ್ಲೂ ಸ್ಕ್ರೀನ್ ಡೋರ್ ಅಳವಡಿಕೆಗೆ ಚಿಂತನೆ

ಬೆಂಗಳೂರು: ಮೆಟ್ರೋ ನಿಲ್ದಾಣಗಳಲ್ಲಿ ಸಾವಿಗೆ ಶರಣಾಗುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿರುವುದನ್ನು ಬೆಂಗಳೂರು ಮೆಟ್ರೋ ರೈಲು ಕಾರ್ಪೋರೇಷನ್ ಲಿಮಿಟೆಡ್ ಗಂಭೀರವಾಗಿ ಪರಿಗಣಿಸಿದ್ದು, ಇಂತಹ ಘಟನೆಗಳನ್ನು ತಡೆಯಲು ಹಲವು ಕ್ರಮಗಳನ್ನು ಕೈಗೊಳ್ಳಲು ಚಿಂತನೆ ನಡೆಸಿದೆ.
ನಗರದ ಎಲ್ಲಾ ಮೆಟ್ರೋ ನಿಲ್ದಾಣಗಳಲ್ಲೂ ಫ್ಲಾಟ್ ಫಾರ್ಮ್ ಸ್ಕ್ರೀನ್ ಡೋರ್ ಅಳವಡಿಕೆಗೆ ಪ್ಲಾನ್ ಮಾಡಲಾಗುತ್ತಿದೆ. ಪ್ರಯಾಣಿಕರ ಸುರಕ್ಷತೆಗಾಗಿ ಯು ಗಾರ್ಡರ್ ಅಳವಡಿಕೆ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ. ಸೆಕ್ಯುರಿಟಿ ಸಿಬ್ಬಂದಿಯ ಸಂಖ್ಯೆಯಲ್ಲೂ ಹೆಚ್ಚಳ ಮಾಡಲು ಮುಂದಾಗಿದೆ ಎಂದು ಹೇಳಲಾಗಿದೆ.
ಕಳೆದ ಬಾರಿ ಸಾವಿಗೆ ಶರಣಾದ ಪ್ರಕರಣ ನಡೆದಾಗಲೇ ಸಿಬ್ಬಂದಿಯ ಸಂಖ್ಯೆಯನ್ನು ಹೆಚ್ಚು ಮಾಡಲಾಗಿತ್ತು. ಇದೀಗ ಪ್ರಯಾಣಿಕರ ಸಂಖ್ಯೆ ಹೆಚ್ಚಿರುವ ಮಾತ್ರವಲ್ಲದೇ ಎಲ್ಲ ನಿಲ್ದಾಣಗಳಲ್ಲೂ ಸಿಬ್ಬಂದಿ ಹೆಚ್ಚಳ ಮಾಡಲು ಮುಂದಾಗಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth