ಮತಾಂತರ ಮಾಡಿ: ಹಿಂದೂಗಳಿಗೆ ಚಕ್ರವರ್ತಿ ಸೂಲಿಬೆಲೆ ಕರೆ

ಮಂಗಳೂರು: ಹಿಂದೂಗಳು ಮತಾಂತರ ಮಾಡುವಂತೆ ವಾಗ್ಮಿ ಚಕ್ರವರ್ತಿ ಸೂಲಿಬೆಲೆ ಬಹಿರಂಗವಾಗಿ ಕರೆ ನೀಡಿದ್ದಾರೆ.
ಉಜಿರೆಯ ರಾಮೋತ್ಸವ ಕಾರ್ಯಕ್ರಮದಲ್ಲಿ ದಿಕ್ಸೂಚಿ ಭಾಷಣ ಮಾಡಿದ ಅವರು, ಬಿಜೆಪಿ ಸರ್ಕಾರ ಇದ್ದಾಗ ಮತಾಂತರ ನಿಷೇಧ ಕಾಯ್ದೆ ಜಾರಿಗೆ ತಂದಿತು, ಹೊಸ ಸರ್ಕಾರ ಬಂದು ಆ ಕಾನೂನು ತೆಗೆದು ಹಾಕಿತು. ಅಂದರೆ ಅದರ ಅರ್ಥ ನೀವೂ ಮತಾಂತರ ಮಾಡಬಹುದು ಅಂತ ಎಂದರು.
ಸರ್ಕಾರವೇ ಧೈರ್ಯವಾಗಿ ಹೇಳಿದೆ, ಮತಾಂತರ ಮಾಡಿ ಅಂತ, ಹಾಗಿದ್ದಾಗ ನಾವು ಮಾಡಬೇಕಲ್ವಾ? ಜಗತ್ತಿನ ಯಾವ ರಾಷ್ಟ್ರದಲ್ಲೂ ಈ ರೀತಿಯ ಪರಿಸ್ಥಿತಿ ಇಲ್ಲ. ಹಾಗಾಗಿ ಮತಾಂತರ ಮಾಡಿ ಅಂತ ಸರ್ಕಾರವೇ ಅಧಿಕೃತವಾಗಿ ಹೇಳಿದೆ, ಮಾಡಲು ನಿಮಗೆ ಕಷ್ಟ ಏನು? ಎಂದು ಪ್ರಶ್ನಿಸಿದರು.
ಮತಾಂತರ ಮಾಡೋದು ಕಷ್ಟ ಏನಿಲ್ಲ, ನಾನು ಜಗತ್ತಿನ ಅತ್ಯಂತ ಶ್ರೇಷ್ಠ ಹಿಂದೂ ಧರ್ಮಕ್ಕೆ ಸೇರಿದವನು. ಜಗತ್ತಿನಲ್ಲಿ ಅನೇಕ ಮತ ಪಂಥಗಳಿವೆ, ಆದರೆ ಅವರಿಗೆಲ್ಲಾ ಒಬ್ಬನೇ ದೇವರು. ಒಬ್ಬ ದೇವರಿಗೆ ಸಮಸ್ಯೆಯಾದ್ರೆ ಆ ಧರ್ಮವೇ ಹೋಯಿತು, ಆದರೆ ನಮಗೆ 33 ಕೋಟಿ ದೇವತೆಗಳು. ನೀವು ರಾಮನನ್ನ ಬೈದರೆ ನಾನು ಸೀತೆಯನ್ನ ಹಿಡಿದುಕೊಳ್ತೀನಿ. ನೀವು ಸೀತೆಗೆ ಕಳಂಕ ತರೋ ಪ್ರಯತ್ನ ಪಟ್ಟರೆ ಶ್ರೀಕೃಷ್ಣ ಇದ್ದಾನೆ. ಕೃಷ್ಣನಿಗೆ ಕಳಂಕ ತರೋ ಪ್ರಯತ್ನ ಪಟ್ಟರೆ ನಮಗೆ ಮಂಜುನಾಥಸ್ವಾಮಿ ಇದ್ದಾನೆ. ನೀವು ಮಂಜುನಾಥನಿಗೆ ಕಳಂಕ ತರೋ ಪ್ರಯತ್ನ ಪಟ್ಟರೆ ನನಗೆ ಊರಲ್ಲೊಂದು ದೇವಸ್ಥಾನ ಇದೆ, ಎಲ್ಲಿ ಬೇಕಾದರೂ ಹೋಗ್ತೀನಿ ಎಂದು ಹೇಳಿದರು.
ಜನಸಂಖ್ಯೆ ಜಾಸ್ತಿ ಮಾಡಲು ಸರ್ಕಾರವೇ ಕೊಟ್ಟ ಇಂಥ ಕಾನೂನುಗಳು ನಮ್ಮಲ್ಲಿವೆ. ಹಾಗಾಗಿ ಸಂಖ್ಯೆ ವಿಸ್ತರಿಸಲು ಈ ರೀತಿಯಲ್ಲಿ ನಾವು ಕೆಲಸ ಮಾಡಬೇಕಿದೆ. ಮುಂದಿನ ಪೀಳಿಗೆಗೆ ಭಾರತ ಬಿಟ್ಟು ಕೊಟ್ಟು ಹೋಗುವಾಗ ಅದಕ್ಕೆ ಸ್ವಲ್ಪ ಪಾಕಿಸ್ತಾನ, ಬಾಂಗ್ಲಾದೇಶ, ಅಗತ್ಯ ಬಿದ್ದರೆ ನೇಪಾಳವನ್ನೂ ಸೇರಿಸೋಣ ಎಂದಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: