ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ: ವೈನ್ ಶಾಪ್ ಮುಂದೆ ಓಡಾಡಿದವರು ಯಾರು?: ಎನ್.ಶಶಿಕುಮಾರ್ ಮಾಹಿತಿ
ಮಂಗಳೂರು: ಮಂಗಳೂರಿನಲ್ಲಿ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ವೈನ್ ಶಾಪ್ ಬಳಿ ಇಬ್ಬರು ಓಡಾಡಿರುವ ಸಿಸಿ ಟಿವಿ ದೃಶ್ಯ ಸಾಮಾಜಿಕ ಜಾಲತಾಣಗಳಲ್ಇ ಹರಿದಾಡುತ್ತಿದ್ದು, ಈ ಸಂಬಂಧ ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಸ್ಪಷ್ಟನೆ ನೀಡಿದ್ದಾರೆ.
ಮದ್ಯದಂಗಡಿ ಬಳಿ ಓಡಾಡಿದ ಇಬ್ಬರಿಗೂ ಈ ಪ್ರಕರಣಕ್ಕೂ ಸಂಬಂಧ ಇಲ್ಲ. ಸಿಸಿಟಿವಿಯಲ್ಲಿ ಇರೋ ಆ ಇಬ್ಬರಲ್ಲಿ ಶಾರಿಕ್ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಮಾಧ್ಯಮದಲ್ಲಿ ಮತ್ತು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರೋ ಮಾಹಿತಿ ಆಧಾರ ರಹಿತ. ಇದನ್ನು ಜನರು ಸರ್ಕ್ಯುಲೇಟ್ ಮಾಡಬಾರದು ಎಂದು ಮನವಿ ಮಾಡಿಕೊಂಡಿದ್ದಾರೆ.
ಸಿಸಿಟಿವಿಯಲ್ಲಿ ಇರುವವರು ರೈಲ್ವೇ ನಿಲ್ದಾಣಕ್ಕೆ ಹೋಗುವ ಪ್ರಯಾಣಿಕರು. ಅವರಿಗೂ ಈ ಪ್ರಕರಣಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ನಾಗುರಿ ಬಳಿ ನಡೆದ ರಿಕ್ಷಾ ಸ್ಪೋಟಕ್ಕೆ ಸಂಬಂಧಿಸಿದಂತೆ ಬಂಧಿತನಾಗಿರುವ ಆರೋಪಿ ಶಾಕೀರ್ ಜೊತೆ ಮತ್ತೊಬ್ಬ ಮಂಗಳೂರಿಗೆ ಆಗಮಿಸಿದ್ದನೆಂಬ ಸಿಸಿಟಿವಿಯ ವೀಡಿಯೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಇದನ್ನೇ ಕೆಲವು ಸುದ್ದಿ ವಾಹಿನಿಗಳು ವರದಿ ಬಿತ್ತರಿಸಿದ್ದವು.
Video:
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka