ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಕೇಸ್: ಎಡಿಜಿಪಿ ಅಲೋಕ್ ಕುಮಾರ್ ಮಹತ್ವದ ಮಾಹಿತಿ
ಮಂಗಳೂರು: ನಗರದ ನಾಗುರಿ ಬಳಿಯಲ್ಲಿ ಆಟೋದಲ್ಲಿ ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಕಮಿಷನರ್ ಕಚೇರಿಯಲ್ಲಿ ಎಡಿಜಿಪಿ ಅಲೋಕ್ ಕುಮಾರ್ ಸುದ್ದಿಗೋಷ್ಠಿ ನಡೆಸಿದ್ದಾರೆ.
ಪ್ರಕರಣದ ಕುರಿತು ಮಾಹಿತಿ ನೀಡಿದ ಅವರು, ಆರೋಪಿ ಆಧಾರ್ ಕಾರ್ಡ್ ನಲ್ಲಿ ಹುಬ್ಬಳ್ಳಿಯ ಪ್ರೇಮ್ ರಾಜ್ ವಿಳಾಸ ಇತ್ತು. ಆದರೆ ಅದನ್ನ ಚೆಕ್ ಮಾಡಿದಾಗ ಪ್ರೇಮ್ ರಾಜ್ ತುಮಕೂರಿನಲ್ಲಿ ಇರೋದು ಗೊತ್ತಾಯಿತು. ಪ್ರೇಮ್ ರಾಜ್ ಆಧಾರ್ ಕಾರ್ಡ್ ಕಳೆದು ಹೋಗಿದ್ದು ಗೊತ್ತಾಯಿತು. ಅದೇ ದಿನ ರಾತ್ರಿ ನಾವು ಅವನು ಬಂದ ಜಾಗ ಪತ್ತೆ ಮಾಡಿದೆವು ಎಂದು ತಿಳಿಸಿದರು.
ಶಾರೀಕ್ ಆಗಸ್ಟ್ 15, 2022 ರ ಶಿವಮೊಗ್ಗ ಗಲಾಟೆ ಬಳಿಕ ಅಲರ್ಟ್ ಆಗಿದ್ದ, ಅವನು ಅಗಸ್ಟ್ 23ರ ಬಳಿಕ ಅಲ್ಲಿಂದ ಪರಾರಿಯಾಗಿದ್ದ, ಅಲ್ಲಿಂದ ಕೊಯಮತ್ತೂರು, ತಮಿಳುನಾಡು, ಕೇರಳ ಎಲ್ಲಾ ಸುತ್ತಾಡಿ ಮೈಸೂರು ಬಂದಿದ್ದ ಅಲ್ಲಿ ರೂಂ ಮಾಡಿ ಮೊಬೈಲ್ ತಯಾರಿ ಇನ್ಸ್ಟಿಟ್ಯೂಟ್ ನಲ್ಲಿ ಕೆಲಸ ಮಾಡ್ತಿದ್ದ. ನಮಗೆ ಮತ್ತೆ ಅವನ ಫೋಟೋ ನೋಡಿ ಶಾರೀಕ್ ಅಂತ ಗೊತ್ತಾಯ್ತು. ಆದರೂ ಅವರ ಮನೆಯವರನ್ನ ಕರೆಸಿ ಗುರುತು ಪತ್ತೆ ಮಾಡಿದ್ದೇವೆ ಎಂದು ಅವರು ಹೇಳಿದರು.
ಶಾರೀಕ್ ನ ಮಲತಾಯಿ ಶಬನಾ, ಸಹೋದರಿ ಆಫಿಯಾ, ತಾಯಿ ತಂಗಿ ಯಾಸ್ಮೀನ್ ಅವನ ಗುರುತು ಪತ್ತೆ ಮಾಡಿದ್ದಾರೆ. 2020ರಲ್ಲಿ ಮಂಗಳೂರಿನಲ್ಲಿ ಗೋಡೆ ಬರಹದಲ್ಲಿ ಈತನ ವಿರುದ್ಧ ಕೇಸ್ ಆಗಿತ್ತು. ಅದರಲ್ಲಿ ಅವನ ಮೇಲೆ ಯುಎಪಿಎ ಆಕ್ಟ್ ನಡಿ ಕೇಸ್ ಆಗಿತ್ತು. A1 ಆರೋಪಿ ಶಾರೀಕ್ ಆಗಿದ್ದ, ಆಗಲೇ ಮನೆಯವರು ಬುದ್ದಿ ಹೇಳಿದ್ದಾರಂತೆ, ಶಿವಮೊಗ್ಗದಲ್ಲಿ ಜಬೀವುಲ್ಲ ಕೇಸ್ ವಿಚಾರಣೆ ವೇಳೆ ಇವರ ಮಾಹಿತಿ ಗೊತ್ತಾಯ್ತು, ಮಾಝ್ ಮುನೀರ್ ಬಂಧನ ಬಳಿಕ ಶಾಕೀರ್ ಟ್ರಾಯಲ್ ಬ್ಲಾಸ್ಟ್ ಮಾಡಿದ್ದು ಗೊತ್ತಾಗಿದೆ. ಆದರೆ ಇದ್ಯಾವ ವಿಚಾರವೂ ಮೈಸೂರು ಮನೆ ಮಾಲೀಕ ಮೋಹನ್ ಗೆ ಗೊತ್ತಿಲ್ಲ ಎಂದು ತಿಳಿಸಿದರು.
ಮೊನ್ನೆ ಮೈಸೂರಿನಿಂದ ಮಡಿಕೇರಿ ಮಾರ್ಗವಾಗಿ ಬಸ್ ನಲ್ಲಿ ಮಂಗಳೂರು ಬಂದಿದ್ದಾನೆ. ಅಲ್ಲಿ ನಾಗುರಿ ಇಳಿದು ಅವನ ಟಾರ್ಗೆಟ್ ಜಾಗಕ್ಕೆ ಹೋಗ್ತಾ ಇದ್ದ. ಆದರೆ ಅವನು ಎಲ್ಲಿಗೆ ಹೋಗ್ತಾ ಇದ್ದ ಅನ್ನೋದು ಗೊತ್ತಾಗಿಲ್ಲ. ಅವನು ಗುಣಮುಖವಾದ ಬಳಿಕ ವಿಚಾರಣೆಯಲ್ಲಿ ಗೊತ್ತಾಗುತ್ತೆ ಎಂದು ಅವರು ತಿಳಿಸಿದರು.
ವಾರದ ಹಿಂದೆ ಒಮ್ಮೆ ಮಂಗಳೂರಿಗೆ ಬಂದು ಸುತ್ತಾಡಿ ಹೋಗಿದ್ದ. ಮೈಸೂರಿನಿಂದ ಇಬ್ಬರು ಹಾಗೂ ಮಂಗಳೂರಿನ ಒಬ್ಬರನ್ನ ಪ್ರಕರಣ ಸಂಬಂಧ ವಶಕ್ಕೆ ಪಡೆದಿದ್ದೇವೆ. ಇವನು ವಿದೇಶದ ಒಂದು ಟೆರರ್ ಸಂಘಟನೆಯ ಪ್ರಭಾವಕ್ಕೆ ಒಳಗಾಗಿದ್ದ. ತೀರ್ಥಹಳ್ಳಿಯ ಅಬ್ದುಲ್ ಮತೀನ್ ತಾಹಾ ಇದರ ಮೈನ್ ಹ್ಯಾಂಡ್ಲರ್ ಆಗಿದ್ದಾನೆ. ಅವನು ತಲೆಮರೆಸಿಕೊಂಡಿದ್ದು, ಎನ್.ಐ.ಎ ಎರಡು ಲಕ್ಷ ರಿವಾರ್ಡ್ ಘೋಷಣೆ ಮಾಡಿದೆ ಎಂದು ಅವರು ತಿಳಿಸಿದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka