ಅಡುಗೆ ಅನಿಲ ಬೆಲೆ ಏರಿಕೆ: ಜನಸಾಮಾನ್ಯರಿಗೆ ಮತ್ತೆ ತಟ್ಟಿದ ಬೆಲೆ ಏರಿಕೆ ಬಿಸಿ
ನವದೆಹಲಿ: ಅಡುಗೆ ಅನಿಲ ಬೆಲೆ ಏರಿಕೆ ಮಾಡುವ ಮೂಲಕ ಕೇಂದ್ರ ಸರ್ಕಾರ ಮತ್ತೆ ಜನಸಾಮಾನ್ಯರಿಗೆ ಶಾಕ್ ನೀಡಿದೆ. ಮಾರ್ಚ್ 1ರಂದು ಅಡುಗೆ ಅನಿಲ ಹಾಗೂ ವಾಣಿಜ್ಯ ಸಿಲಿಂಡರ್ ಬೆಲೆ ಹೆಚ್ಚಳವಾಗಿದೆ.
14.2 ಕೆಜಿ ತೂಕದ ದೇಶೀಯ ಎಲ್ ಪಿಜಿ ಸಿಲಿಂಡರ್ ಬೆಲೆ ಇಂದಿನಿಂದ 50 ರೂಪಾಯಿ ಹೆಚ್ಚಳವಾಗುತ್ತದೆ. ರಾಜಧಾನಿ ದೆಹಲಿಯಲ್ಲಿ ಅಡುಗೆಗೆ ಬಳಸುವ ಸಿಲಿಂಡರ್ ಗೆ ಇನ್ನು ಮುಂದೆ ಗ್ರಾಹಕರು 1,103 ರೂಪಾಯಿ ಪಾವತಿಸಬೇಕಿದೆ.
ಅಲ್ಲದೆ, 19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ನ ಬೆಲೆಯನ್ನು 350 ರೂಪಾಯಿ 50 ಪೈಸೆ ಹೆಚ್ಚಿಸಲಾಗಿದೆ, ಈ ಹೆಚ್ಚಳದೊಂದಿಗೆ 19 ಕೆಜಿ ವಾಣಿಜ್ಯ ಸಿಲಿಂಡರ್ನ ಬೆಲೆ ದೆಹಲಿಯಲ್ಲಿ 2,119 ರೂಪಾಯಿ 50 ಪೈಸೆ ಆಗಲಿದೆ. ಹೊಸ ದರಗಳು ಇಂದಿನಿಂದ ಜಾರಿಗೆ ಬರಲಿವೆ.
ದೆಹಲಿಯಲ್ಲಿ 14.2 ಕೆ.ಜಿ ಎಲ್‌ಪಿಜಿ ಸಿಲಿಂಡರ್ನ ಹೊಸ ಪರಿಷ್ಕೃತ ಬೆಲೆ ಇಂದಿನಿಂದ ರೂ. 1053 ರ ಬದಲಿಗೆ ರೂ. 1103 ಆಗಿರುತ್ತದೆ. ಮುಂಬೈನಲ್ಲಿ, ಈ 1052.50 ರ ಬದಲಿಗೆ ಇನ್ನು ಮುಂದೆ 1,102.5 ಗೆ ಮಾರಾಟ ಮಾಡಲಾಗುತ್ತದೆ. ಕೋಲ್ಕತ್ತಾದಲ್ಲಿ 1,079ರ ಬದಲು 1,129 ಹಾಗೂ ಚೆನ್ನೈನಲ್ಲಿ 1,068.50ರ ಬದಲಿಗೆ 1,118.5ರಷ್ಟು ದುಬಾರಿಯಾಗಿದೆ.
ಇಂದಿನಿಂದ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದೆಹಲಿಯಲ್ಲಿ 1,769 ಬದಲಿಗೆ 2,119.5ಕ್ಕೆ ಲಭ್ಯವಿರುತ್ತದೆ.ಕೋಲ್ಕತ್ತಾದಲ್ಲಿ 1,870 ಇದ್ದದ್ದು ಈಗ 2,221.5 ಆಗಿದೆ.ಮುಂಬೈನಲ್ಲಿ ಇದರ ಬೆಲೆ ಈಗ 1,721 ರಿಂದ 2,071.50ಕ್ಕೆ ಏರಿಕೆಯಾಗಿದೆ. ಚೆನ್ನೈನಲ್ಲಿ 1,917ಕ್ಕೆ ಸಿಗುತ್ತಿದ್ದ ಸಿಲಿಂಡರ್ ಈಗ 2,268ಕ್ಕೆ ದೊರೆಯಲಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw