ಗ್ರಾಹಕರಿಗೆ ಮತ್ತೊಮ್ಮೆ ಬೆಲೆ ಏರಿಕೆ ಶಾಕ್: LPG ಸಿಲಿಂಡರ್ ಗೆ 15 ರೂಪಾಯಿ ಏರಿಕೆ - Mahanayaka
5:10 AM Wednesday 11 - December 2024

ಗ್ರಾಹಕರಿಗೆ ಮತ್ತೊಮ್ಮೆ ಬೆಲೆ ಏರಿಕೆ ಶಾಕ್: LPG ಸಿಲಿಂಡರ್ ಗೆ 15 ರೂಪಾಯಿ ಏರಿಕೆ

lpg cylinder price
06/10/2021

ನವದೆಹಲಿ: ದೇಶದ ಜನರಿಗೆ ಮತ್ತೊಮ್ಮೆ ಗ್ಯಾಸ್ ಬೆಲೆ ಏರಿಕೆಯ ಬಿಸಿ ತಟ್ಟಿದ್ದು, ಪೆಟ್ರೋಲಿಯಂ ಕಂಪೆನಿಗಳು ಬೆಳ್ಳಂಬೆಳಗ್ಗೆ ಬಿಗ್ ಶಾಕ್  ನೀಡಿದೆ, ಎಲ್ ಪಿಜಿ ಸಿಲಿಂಡರ್ ಗಳಿಗೆ ಮತ್ತೆ 15 ರೂಪಾಯಿ ಹೆಚ್ಚಿಸಲಾಗಿದೆ. ಈ ಮೂಲಕ ಗ್ರಾಹಕರ ಜೇಬಿಗೆ  ಮತ್ತೆ ಕನ್ನ ಹಾಕಲಾಗಿದೆ.

14.2 KGಯ ಗೃಹಬಳಕೆ ಸಿಲಿಂಡರ್ ಬೆಲೆಯನ್ನು ಯಾವುದೇ ಸಬ್ಸಿಡಿ ಇಲ್ಲದೆ 15 ರೂಪಾಯಿಗೆ ಏರಿಕೆ ಮಾಡಲಾಗಿದೆ.  ಕಳೆದ 15 ದಿನಗಳಲ್ಲಿ ಇದು ಮೂರನೇ ಬಾರಿಗೆ ಗ್ಯಾಸ್ ಸಿಲಿಂಡರ್ ಬೆಲೆಯನ್ನು ಏರಿಕೆ ಮಾಡಲಾಗಿದೆ. ಈ ಮೂಲಕ ನವದೆಹಲಿಯಲ್ಲಿ ಒಂದು ಗ್ಯಾಸ್ ಸಿಲಿಂಡರ್ ಬೆಲೆ 899.5ರೂಪಾಯಿಗೆ ಏರಿಕೆಯಾಗಿದೆ.

ಕಳೆದ ಸೆಪ್ಟಂಬರ್ 1ರಂದು 14.2 ಕೆ.ಜಿ. LPG ಸಿಲಿಂಡರ್ ಬೆಲೆ  25 ರೂಪಾಯಿ ಏರಿಕೆ ಮಾಡಲಾಗಿತ್ತು. ಆ ಬಳಿಕ ಆಗಸ್ಟ್  17ರಂದು 25 ರೂಪಾಯಿ ಮತ್ತೆ ಬೆಲೆ ಏರಿಕೆ ಮಾಡಲಾಗಿತ್ತು,. ಇದೀಗ 15 ರೂಪಾಯಿ ಮತ್ತೆ ಏರಿಸಲಾಗಿದೆ. ಆರ್ಥಿಕ ಸಂಕಷ್ಟಗಳ ನಡುವೆ ಬೆಲೆ ಏರಿಕೆಯು, ಮಧ್ಯಮ ವರ್ಗವನ್ನು ಸಂಕಷ್ಟಕ್ಕೆ ಸಿಲುಕಿಸಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/GprkhpfFmuL8YDKlAEmru9

ಇನ್ನಷ್ಟು ಸುದ್ದಿಗಳು…

ಸಾವಿನ ಕೊನೆಯ ಕ್ಷಣದಲ್ಲಿ “ಅಪ್ಪಾ ಬೇಗ ಬನ್ನಿ” ಎಂದು ಮಗ ಹೇಳಿದ್ದ | ಮಗನ ಸಾವು ನೆನೆದು ಬಿಕ್ಕಿಬಿಕ್ಕಿ ಅತ್ತ ರೈತ

ಆರೆಸ್ಸೆಸ್ ಬಗ್ಗೆ ಕುಮಾರಸ್ವಾಮಿ ಹೇಳಿಕೆ ಅಜ್ಞಾನ, ಭೀತಿ, ವೈಯಕ್ತಿಕ ಹತಾಶೆಯಾಗಿದೆ | ಬಿ.ವೈ.ವಿಜಯೇಂದ್ರ ಕಿಡಿ

ಮಾಟ ಮಂತ್ರದಿಂದ ನೆಮ್ಮದಿ ಪಡೆಯಲು ಹೋಗಿ 4.41 ಕೋಟಿ ರೂಪಾಯಿ ಕಳೆದುಕೊಂಡ ಮಹಿಳೆ

ಟಿಎಂಸಿ ಸೇರ್ಪಡೆಗೂ ಮುನ್ನ ಕೇಶಮುಂಡನ ಮಾಡಿ ಆತ್ಮಶುದ್ಧಿ ಮಾಡಿಕೊಂಡ ಬಿಜೆಪಿ ಶಾಸಕ!

ಗಾಂಧಿ ಜಯಂತಿ ದಿನವೇ ಪರಿಶಿಷ್ಟ ಜಾತಿ ವಿದ್ಯಾರ್ಥಿನಿಗೆ ಶಿಕ್ಷಕನಿಂದ ದೈಹಿಕ ಹಲ್ಲೆ

ಲಖೀಂಪುರ್ ಖೇರ್ ಸಚಿವನ ಪುತ್ರ ರೈತರನ್ನು ಕೆಣಕಿ, ಗುಂಡು ಹಾರಿಸಿದ್ದ | ಎಫ್ ಐಆರ್ ನಲ್ಲಿ ಉಲ್ಲೇಖ

ರೈಲಿನಲ್ಲಿ ಅಪ್ರಾಪ್ತೆಗೆ ಮೇಲೆ ಲೈಂಗಿಕ ಕಿರುಕುಳ ನಡೆಸಿದವನಿಗೆ 5 ವರ್ಷ ಜೈಲು ಶಿಕ್ಷೆ

ಇತ್ತೀಚಿನ ಸುದ್ದಿ