ಆಂಧ್ರದ ಮಾಜಿ ಸಿಎಂ ಜಗನ್ಮೋಹನ್ ರೆಡ್ಡಿ ‘ಇಂಡಿಯಾ’ಗೆ ಸೇರ್ತಾರ..?
ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ವೈ.ಎಸ್ ಆರ್ ಕಾಂಗ್ರೆಸ್ ನಾಯಕ ಜಗನ್ ಮೋಹನ್ ರೆಡ್ಡಿ ಇಂಡಿಯಾ ಮೈತ್ರಿಕೂಟ ಸೇರುತ್ತಾರೆಯೇ? ನಿನ್ನೆ ದೆಹಲಿಯಲ್ಲಿ ಕಂಡ ಬೆಳವಣಿಗೆ ಇಂತಹದ್ದೊಂದು ಚರ್ಚೆಗೆ ಆಸ್ಪದ ನೀಡಿದೆ. ಜಗನ್ ಮೋಹನ್ ರೆಡ್ಡಿ ಅವರು ಬುಧವಾರ ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ಇಂಡಿಯಾ ಮೈತ್ರಿ ಕೂಟದ ಹಲವು ನಾಯಕರು ಭಾಗವಹಿಸಿದ್ದರು.
ಆಂಧ್ರಪ್ರದೇಶದಲ್ಲಿ ಹದಗೆಟ್ಟಿರುವ ಕಾನೂನು ಸುವ್ಯವಸ್ಥೆ ಮತ್ತು ಹಿಂಸಾಚಾರದ ವಿರುದ್ಧ ವೈಎಸ್‌ಆರ್ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಜಗನ್ ಮೋಹನ್ ರೆಡ್ಡಿ ನಿನ್ನೆ ಜಂತರ್ ಮಂಥರ್ ನಲ್ಲಿ ಪ್ರತಿಭಟನೆ ನಡೆಸಿದರು .
ಜಗನ್ ಮೋಹನ್ ರೆಡ್ಡಿ ನಡೆಸುತ್ತಿರುವ ಪ್ರತಿಭಟನೆ ಯಲ್ಲಿ ಅಖಿಲೇಶ್ ಯಾದವ್ ಸಹಿತ ಇಂಡಿಯಾ ಮೈತ್ರಿ ಕೂಟ ದ ನಾಯಕರು ಭಾಗವಹಿಸಿದ್ದು ಹೊಸ ಚರ್ಚೆಯನ್ನು ಹುಟ್ಟುಹಾಕಿದೆ. ಪ್ರತಿಭಟನಾ ಸ್ಥಳಕ್ಕೆ ಶಿವಸೇನೆಯ ಉದ್ಬವ್ ಠಾಕ್ರೆ ಬಣದ ಸಂಸದ ಸಂಜಯ್ ರಾವತ್ , ಎಸ್ಪಿ ನಾಯಕ ಅಖೀಲೇಶ್ ಯಾದವ್, ಡಿ.ಎಂ.ಕೆಯ ನಾಯಕರು ಭೇಟಿ ಕೊಟ್ಟಿದ್ದರು.. ಇದು ವೈಎಸ್ ಆರ್ ಕಾಂಗ್ರೆಸ್ ಇಂಡಿಯಾ ಮೈತ್ರಿ ಕೂಟ ಸೇರುವ ಸಾಧ್ಯತೆಯನ್ನು ಹುಟ್ಟು ಹಾಕಿದೆ. ಈ ಬಗ್ಗೆ ಜಗನ್ ಮೋಹನ್ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth