ಕೊರೊನಾ ಕಾಲದಲ್ಲಿ ಬಡವರ ಹೊಟ್ಟೆಗೆ ಹೊಡೆದ ರಾಜ್ಯ ಬಿಜೆಪಿ ಸರ್ಕಾರ!

ಬೆಂಗಳೂರು: ಕರ್ನಾಟಕದ ಬಹಳಷ್ಟು ಕುಟುಂಬಗಳು ಅನ್ನಭಾಗ್ಯದ ಅಕ್ಕಿಯನ್ನೇ ನಂಬಿಕೊಂಡು ಜೀವಿಸುತ್ತಿದ್ದಾರೆ. ಆದರೆ, ಬಿಜೆಪಿ ಸರ್ಕಾರ ಬಂದ ಬಳಿಕ ಬಡವರ ಹೊಟ್ಟೆಗೆ ತಣ್ಣೀರ ಬಟ್ಟೆ ಎಂಬಂತಾಗಿದ್ದು, ಅಂತ್ಯೋದಯ ಹಾಗೂ ಬಿಪಿಎಲ್ ಕಾರ್ಡ್ ದಾರರಿಗೆ ವಿತರಿಸುತ್ತಿರುವ ಅಕ್ಕಿಯ ಪ್ರಮಾಣವನ್ನು ಮತ್ತೆ ಇಳಿಕೆ ಮಾಡಲಾಗಿದೆ.
ಬಿವಿಎಲ್ ಕಾರ್ಡ್ ದಾರರಿಗೆ ಪ್ರತಿ ಕುಟುಂಬದ ಒಬ್ಬ ಸದಸ್ಯನಿಗೆ 5 ಕೆ.ಜಿ. ಅಕ್ಕಿ, 2 ಕೆ.ಜಿ. ಗೋದಿ ವಿತರಿಸಲಾಗುತ್ತಿತ್ತು. ಆದರೆ ಇದೀಗ ರಾಜ್ಯ ಸರ್ಕಾರವು ಈ ತಿಂಗಳಿನಿಂದ 2 ಕೆ.ಜಿ. ಅಕ್ಕಿ, 3 ಕೆ.ಜಿ. ರಾಗಿ ಹಾಗೂ 2 ಕೆ.ಜಿ. ಗೋದಿ ನೀಡುವ ಹೊಸ ಪದ್ಧತಿಯನ್ನು ತಂದಿದೆ.
ಅಂತ್ಯೋದಯ ಅನ್ನ ಯೋಜನೆಯ ಪಡಿತರ ಚೀಟಿಗೆ 15 ಕೆ.ಜಿ.ಅಕ್ಕಿ, 20 ಕೆ.ಜಿ. ರಾಗಿ ನೀಡಲು ನಿರ್ಧರಿಸಲಾಗಿದೆ. ಕೊರೊನಾ ಕಾಲದಲ್ಲಿ ಸರ್ಕಾರವು ಏಕಾಏಕಿ ಇಂತಹ ನಿರ್ಧಾರಕ್ಕೆ ಬಂದಿರುವುದರಿಂದ ಬಡವರು ಸಂಕಷ್ಟಕ್ಕೀಡಾಗಲಿದ್ದಾರೆ. ಈಗಾಗಲೇ ರಾಜ್ಯದಲ್ಲಿ ಸಾಕಷ್ಟು ಸಮಸ್ಯೆಗಳಿಂದ ಬಡವರು ಬಳಲುತ್ತಿದ್ದರೂ ಸರ್ಕಾರದ ಬಳಿಯಲ್ಲಿ ಯಾವುದಕ್ಕೂ ಪರಿಹಾರವಿಲ್ಲ. ಈ ನಡುವೆ ಇರುವುದನ್ನು ಕೂಡ ಸರ್ಕಾರ ಕಿತ್ತುಕೊಳ್ಳಲು ಮುಂದಾಗುವುದು ಸರಿಯಲ್ಲ ಎನ್ನುವ ಮಾತುಗಳು ಕೇಳಿ ಬಂದಿವೆ.