“ಕೊರೊನಾ ಸಂಕಷ್ಟದಲ್ಲಿ ಬಡ ಕುಟುಂಬಗಳಿಗೆ ತಿಂಗಳಿಗೆ 6 ಸಾವಿರ ನೆರವು ನೀಡಿ”
ನವದೆಹಲಿ: ಕೊರೊನಾ ಸಂಕಷ್ಟದ ಸಂದರ್ಭದಲ್ಲಿ ದೇಶದ ಬಡ ಕುಟುಂಬಗಳಿಗೆ ಸರ್ಕಾರವು ಹಣಕಾಸಿನ ನೆರವು ನೀಡಬೇಕು ಎಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಒತ್ತಾಯಿಸಿದ್ದಾರೆ.
ಕೊರೊನಾ ಪರಿಸ್ಥಿತಿಯಿಂದ ಅನೇಕ ಬಡ ಕುಟುಂಬಗಳು ಇನ್ನೂ ಚೇತರಿಸಿಕೊಂಡಿಲ್ಲ. ಇಂತಹ ಸಮಯದಲ್ಲಿ ಮತ್ತೆ ಕೋವಿಡ್ ಅಲೆ ವ್ಯಾಪಿಸಿದೆ. ಇಂತಹ ಸಂದರ್ಭದಲ್ಲಿ ಬಡ ಕುಟುಂಬಗಳ ನೆರವಿಗೆ ಧಾವಿಸಬೇಕಿರುವುದು ಸರ್ಕಾರದ ಆದ್ಯ ಕರ್ತವ್ಯ ಎಂದು ಸೋನಿಯಾ ಗಾಂಧಿ ಹೇಳಿದ್ದಾರೆ.
ಅಶಕ್ತ ಬಡ ಕುಟುಂಬಗಳಿಗೆ ಪ್ರತಿ ತಿಂಗಳು 6 ಸಾವಿರ ರೂಪಾಯಿ ಹಣಕಾಸಿನ ನೆರವನ್ನು ಸರ್ಕಾರ ನೀಡಬೇಕು. ಇದು ಕಡ್ಡಾಯವಾಗಿ ನೀಡಲೇ ಬೇಕು ಎಂದು ಕೇಂದ್ರ ಸರ್ಕಾರವನ್ನು ಸೋನಿಯಾ ಗಾಂಧಿ ಒತ್ತಾಯಿಸಿದ್ದಾರೆ.
ದೇಶದ ಕರೊನಾ ಪರಿಸ್ಥಿತಿ ಬಗ್ಗೆ ತಮ್ಮ ಪಕ್ಷದ ಮುಖಂಡರ ಸಭೆ ನಡೆಸಿದ ಸೋನಿಯಾ ಗಾಂಧಿ ಈ ಅಭಿಪ್ರಾಯವನ್ನು ವ್ಯಕ್ತಪಡಿಸಿದರು. ಕೋವಿಡ್ನಿಂದ ಈಗಾಗಲೇ ಒಂದು ವರ್ಷ ಭಾರತ ನರಳಿದ್ದಲ್ಲದೇ ಈಗ ಮತ್ತೆ ಸಂಕಷ್ಟಕ್ಕೆ ಸಿಕ್ಕಿ ಬಿದ್ದಿದೆ. ನಮ್ಮ ಸಲಹೆ ಸೂಚನೆಗಳನ್ನು ಕೇಂದ್ರ ಸರ್ಕಾರ ಕಡೆಗಣಿಸಿರುವುದು ಸ್ಪಷ್ಟವಾಗಿ ಎದ್ದು ತೋರುತ್ತಿದೆ ಎಂದು ಸೋನಿಯಾ ಗಾಂಧಿ ಬೇಸರ ವ್ಯಕ್ತಪಡಿಸಿದ್ದಾರೆ.