ಕೊರೊನಾ ವೈರಸ್ ಗೆ ಮತ್ತೋರ್ವ ಬಿಜೆಪಿ ಶಾಸಕ ಬಲಿ!

23/04/2021
ಔರೆಯಾ: ಉತ್ತರ ಪ್ರದೇಶದ ಔರೆಯಾ ಕ್ಷೇತ್ರದ ಬಿಜೆಪಿ ಶಾಸಕ ರಮೇಶ್ ದಿವಾಕರ್ ಕೊರೊನಾ ವೈರಸ್ ಗೆ ಬಲಿಯಾಗಿದ್ದು, ಕೊರೊನಾ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿ ಅವರು ಚಿಕಿತ್ಸೆ ಪಡೆಯುತ್ತಿದ್ದರು ಎಂದು ತಿಳಿದು ಬಂದಿದೆ.
ಕೊರೊನಾ ಪಾಸಿಟಿವ್ ಬಂದ ಬಳಿಕ ಮೀರತ್ ನ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಶಾಸಕ ರಮೇಶ್ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಅವರು ಇಂದು ಮೃತಪಟ್ಟಿದ್ದಾರೆ.
ಶಾಸಕರ ಅನಿರೀಕ್ಷಿತ ಸಾವಿನಿಂದಾಗಿ ಅವರ ಅಭಿಮಾನಿಗಳು ಕಂಗಾಲಾಗಿದ್ದಾರೆ. ಇವರ ನಿಧನಕ್ಕೆ ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.