ಶಾಕಿಂಗ್ ನ್ಯೂಸ್: ಕೊರೊನಾ ವೈರಸ್ ಗೆ ಮೂವರು ಶಾಸಕರು ಬಲಿ - Mahanayaka
3:55 PM Thursday 6 - February 2025

ಶಾಕಿಂಗ್ ನ್ಯೂಸ್: ಕೊರೊನಾ ವೈರಸ್ ಗೆ ಮೂವರು ಶಾಸಕರು ಬಲಿ

covid
24/04/2021

ನವದೆಹಲಿ : ಕೊರೊನಾ ದೇಶಾದ್ಯಂತ ಮತ್ತೆ ಆತಂಕವನ್ನು ಸೃಷ್ಟಿಸಿದ್ದು, ಮಧ್ಯಪ್ರದೇಶದ ಕಾಂಗ್ರೆಸ್ ಶಾಸಕಿ ಹಾಗೂ ಉತ್ತರ ಪ್ರದೇಶದ ಇಬ್ಬರು ಬಿಜೆಪಿ ಶಾಸಕರು ಬಲಿಯಾಗಿದ್ದಾರೆ.

ಮಧ್ಯಪ್ರದೇಶದ ಅಲಿರಾಜಪುರ ಜಿಲ್ಲೆಯ ಜೋಬಟ್ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕಿ ಕಲಾವತಿ ಭೂರಿಯಾ ಕೊರೊನಾದಿಂದ ಮೃತಪಟ್ಟಿದ್ದಾರೆ. 10 ದಿನಗಳ ಹಿಂದೆ ಅವರಿಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

ಉತ್ತರ ಪ್ರದೇಶದ ಇಬ್ಬರು ಶಾಸಕರು ಕೊರೊನಾ ವೈರಸ್ ಗೆ ಬಲಿಯಾಗಿದ್ದಾರೆ. ಲಕ್ನೋ ಕ್ಷೇತ್ರದ ಶಾಸಕ ಸುರೇಶ್ ಶ್ರೀವಾತ್ಸವ್ ಕಳೆದ ಕೆಲ ದಿನಗಳಿಂದ ಕೊರೊನಾ ಸೋಂಕಿನಿಂದ ಬಳಲುತ್ತಿದ್ದರು. ಹೀಗಾಗಿ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

ಔರಿಯಾ ಸದರ್ ನ ಬಿಜೆಪಿ ಶಾಸಕ ರಮೇಶ್ ಚಂದ್ರ ಕೂಡ ಕೊರೊನಾ ವೈರಸ್ ಗೆ ಬಲಿಯಾಗಿದ್ದಾರೆ. ಇನ್ನು ಇವರ ಪತ್ನಿಗೂ ಕೊರೊನಾ ವೈರಸ್ ಸೋಂಕು ದೃಢಪಟ್ಟಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.

ಇತ್ತೀಚಿನ ಸುದ್ದಿ