ಕೊರೊನಾದಿಂದ ಶಿಕ್ಷಕರ ಸಾವು: ಸರಕಾರಕ್ಕೆ ಹೈಕೋರ್ಟ್ ನಿಂದ ನೋಟಿಸ್
20/05/2021
ಬೆಂಗಳೂರು: ರಾಜ್ಯದಲ್ಲಿ ಇತ್ತೀಚೆಗೆ ನಡೆದ ಉಪ ಚುನಾವಣೆಗೆ ನಿಯೋಜನೆಗೊಂಡು ಕೊರೊನಾಗೆ ಸಾವನ್ನಪ್ಪಿದ ಶಿಕ್ಷಕರಿಗೆ ಪರಿಹಾರ ಕೋರಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್ ಗಂಭೀರವಾಗಿ ಪರಿಗಣಿಸಿದೆ.
ಗುರುವಾರ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ಪೀಠ ರಾಜ್ಯ ಸರ್ಕಾರ ಮತ್ತು ಚುನಾವಣಾ ಆಯೋಗಕ್ಕೆ ನೋಟಿಸ್ ನೀಡಿದೆ.
ಚುನಾವಣೆ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ 55 ಶಿಕ್ಷಕರು ಕೊರೊನಾ ಸೊಂಕಿಗೆ ಬಲಿಯಾಗಿದ್ದರು. ಅನೇಕರ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಚುನಾವಣೆ ಕರ್ತವ್ಯಕ್ಕೆ ನಿಯೋಜನೆಗೊಂಡು ಕೊರೊನಾ ಸೋಂಕಿನಿಂದ ಮೃತಪಟ್ಟ ಶಿಕ್ಷಕರಿಗೆ ನ್ಯಾಯ ಕೊಡಿ ಎಂದು ಬೀದರ್ ಮೂಲದ ಅಂಬರೀಶ್ ಕೆಂಚ ಎಂಬವರು ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.
ಅರ್ಜಿ ವಿಚಾರಣೆ ನಡೆಸಿದ ನ್ಯಾ. ಸತೀಶ್ ಚಂದ್ರ ಶರ್ಮಾ ಮತ್ತು ನಾಗಪ್ರಸನ್ನ ಅವರನ್ನು ಒಳಗೊಂಡ ಪೀಠ ಅರ್ಜಿ ವಿಚಾರಣೆ ನಡೆಸಿ ನೋಟಿಸ್ ಜಾರಿ ಮಾಡಿದೆ.