ಬೆಳಗಾವಿ: ಚುನಾವಣೆ ಕರ್ತವ್ಯ ನಿರ್ವಹಿಸಿದವರ ಪೈಕಿ ಕೊರೊನಾಕ್ಕೆ ಬಲಿಯಾದ ಶಿಕ್ಷಕರೆಷ್ಟು ಗೊತ್ತಾ?
17/05/2021
ಬೆಳಗಾವಿ: ಬೆಳಗಾವಿ ಲೋಕಸಭಾ ಉಪ ಚುನಾವಣೆ ಕರ್ತವ್ಯದಲ್ಲಿ ಭಾಗವಹಿಸಿದ್ದ 10 ಶಿಕ್ಷಕರು ಕೊರೊನಾದಿಂದ ಸಾವನ್ನಪ್ಪಿದ್ದಾರೆ ಎಂದು ಡಿಡಿಪಿಐ ಎ.ಬಿ.ಪುಂಡಲೀಕ ಮಾಹಿತಿ ನೀಡಿದ್ದಾರೆ.
ಜಿಲ್ಲೆಯಲ್ಲಿ ಕೊರೊನಾ 2ನೇ ಅಲೆಗೆ 20 ಶಿಕ್ಷಕರು ಸಾವನ್ನಪ್ಪಿದ್ದು, ಈ ಪೈಕಿ10 ಶಿಕ್ಷಕರು ಬೆಳಗಾವಿ ಲೋಕಸಭಾ ಚುನಾವಣೆಯಲ್ಲಿ ಕರ್ತವ್ಯ ನಿರ್ವಹಿಸಿದವರಾಗಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ಇಲ್ಲಿಯವರೆಗೆ ಬೆಳಗಾವಿ ಜಿಲ್ಲೆಯಲ್ಲಿ 90 ಶಿಕ್ಷಕರು ಸಾವನ್ನಪ್ಪಿದ್ದು, ಬೆಳಗಾವಿಯಲ್ಲಿ ಮೊದಲನೇ ಅಲೆಯಲ್ಲಿ 23 ಹಾಗೂ 2ನೇ ಅಲೆಯಲ್ಲಿ 20 ಶಿಕ್ಷಕರು ಸಾವನ್ನಪ್ಪಿದ್ದಾರೆ. ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯಲ್ಲಿ ಮೊದಲ ಅಲೆಯ ಸಂದರ್ಭ 18, ಎರಡನೇ ಅಲೆಯಲ್ಲಿ 29 ಶಿಕ್ಷಕರು ಪ್ರಾಣ ಕಳೆದುಕೊಂಡಿದ್ದಾರೆ ಎಂದು ಅವರು ಮಾಹಿತಿ ನೀಡಿದ್ದಾರೆ.