ಆ. 9ರಂದು ಕಾರ್ಪೋರೇಟ್ ಕಂಪೆನಿಗಳ ವಿರುದ್ಧ ದೇಶವ್ಯಾಪಿ ಪ್ರತಿಭಟನೆ  - Mahanayaka
5:23 AM Thursday 19 - September 2024

ಆ. 9ರಂದು ಕಾರ್ಪೋರೇಟ್ ಕಂಪೆನಿಗಳ ವಿರುದ್ಧ ದೇಶವ್ಯಾಪಿ ಪ್ರತಿಭಟನೆ 

protest
07/08/2021

ಮಂಗಳೂರು: ಕ್ವಿಟ್ ಇಂಡಿಯಾ ಚಳುವಳಿಯ ಸವಿನೆನಪಿನಲ್ಲಿ,ದೇಶದ ಸಂಪತ್ತನ್ನು ಲೂಟಿ ಹೊಡೆಯುತ್ತಿರುವ ಕಾರ್ಪೋರೇಟ್ ಕಂಪೆನಿಗಳ ವಿರುದ್ಧ ಹಾಗೂ ಕೇಂದ್ರ ಸರ್ಕಾರದ ರೈತ ಕಾರ್ಮಿಕ ವಿರೋಧಿ ನೀತಿಗಳನ್ನು ಖಂಡಿಸಿ, ಆಗಸ್ಟ್ 9 ರಂದು ದೇಶವ್ಯಾಪಿ ಪ್ರತಿಭಟನೆ ಜರುಗಲಿದ್ದು, ಅಂದು ಬೆಳಿಗ್ಗೆ 10 ಗಂಟೆಗೆ ನಗರದ ಕ್ಲಾಕ್ ಟವರ್ ಬಳಿಯಲ್ಲಿ ಪ್ರತಿಭಟನಾ ಪ್ರದರ್ಶನ ಜರುಗಲಿದೆ ಎಂದು ರೈತ ಕಾರ್ಮಿಕ ಸಂಘಟನೆಗಳಾದ CITU – AIKS ಜಂಟಿ ಹೇಳಿಕೆಯೊಂದರಲ್ಲಿ ತಿಳಿಸಿದೆ.

ಕೃಷಿ ರಂಗದ ಸುಧಾರಣೆಗಳ ಹೆಸರಿನಲ್ಲಿ ಕೇಂದ್ರ ಸರ್ಕಾರ ಅಂಗೀಕರಿಸಿರುವ ಮೂರು ಹೊಸ ಕೃಷಿ ಕಾನೂನುಗಳು ಸಂಪೂರ್ಣವಾಗಿ ರೈತ ವಿರೋಧಿಯಾಗಿದೆ. ಮಾತ್ರವಲ್ಲದೆ, ಕಾರ್ಪೋರೇಟ್ ಕಂಪೆನಿಗಳ ಪರವಾಗಿದೆ. ಇಂತಹ ದೇಶವಿರೋಧಿ ಕೃಷಿ ನೀತಿಗಳ ವಿರುದ್ಧ ರೈತರು ಕಳೆದ 7 ತಿಂಗಳಿನಿಂದ ಹೋರಾಟದ ಪಥದಲ್ಲಿದ್ದರೂ,ಸರಕಾರವು ಮಾತ್ರ ದಿವ್ಯ ಮೌನ ವಹಿಸಿದೆ. ಮತ್ತೊಂದು ಕಡೆ ಕಾರ್ಮಿಕ ವರ್ಗದ ಎಲ್ಲಾ ಪ್ರಮುಖ ಕಾನೂನುಗಳನ್ನು ಸಂಹಿತೆಗಳನ್ನಾಗಿ ಮಾರ್ಪಡಿಸಿ ಕಾರ್ಮಿಕರ ಹಕ್ಕು ಭಾದ್ಯತೆಗಳನ್ನು ಕಸಿಯಲು ಹೊರಟಿದೆ. ಇಂತಹ ಫ್ಯಾಸಿಸ್ಟ್ ಸರಕಾರದ ವಿರುದ್ಧ ರೈತ ಕಾರ್ಮಿಕರು ಜನಸಾಮಾನ್ಯರು ಸಂಘಟಿತ ಹೋರಾಟ ನಡೆಸಬೇಕಾಗಿದೆ ಎಂದು ಸಂಘಟನೆಗಳು ಕರೆ ನೀಡಿವೆ.

ಅಂದು “ಬ್ರಿಟೀಷರೇ ಭಾರತ ಬಿಟ್ಟು ತೊಲಗಿ” ಎಂಬ ಘೋಷ ವಾಕ್ಯದೊಂದಿಗೆ ಕ್ವಿಟ್ ಇಂಡಿಯಾ ಚಳುವಳಿಯು ಸ್ವಾತಂತ್ರ್ಯ ಸಂಗ್ರಾಮದಲ್ಲಿ ಮಹತ್ವದ ಮೈಲುಗಲ್ಲಾಗಿದ್ದು, ಇಂದು ದೇಶದ ಸಂಪತ್ತನ್ನು ಕೊಳ್ಳೆ ಹೊಡೆಯುವ ಕಾರ್ಪೋರೇಟ್ ಕಂಪೆನಿಗಳ ವಿರುದ್ದ ಎರಡನೆಯ ಸ್ವಾತಂತ್ರ್ಯ ಸಂಗ್ರಾಮಕ್ಕೆ ರೈತ ಕಾರ್ಮಿಕರು ಅಣಿಯಾಗುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಆಗಸ್ಟ್ 9ರಂದು ಜರುಗಲಿರುವ ಪ್ರತಿಭಟನೆ ಯಲ್ಲಿ ರೈತ ಕಾರ್ಮಿಕರು, ಸಾರ್ವಜನಿಕ ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು AIKS ದ.ಕ.ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕೆ.ಯಾದವ ಶೆಟ್ಟಿ ಹಾಗೂ CITU ದ.ಕ.ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್ ರವರು ಜಂಟಿ ಪತ್ರಿಕಾ ಹೇಳಿಕೆಯೊಂದರಲ್ಲಿ ತಿಳಿಸಿದ್ದಾರೆ.


Provided by

ಇನ್ನಷ್ಟು ಸುದ್ದಿಗಳು…

ವಿದ್ಯಾರ್ಥಿನಿ ಜೊತೆಗೆ ರಾಸಲೀಲೆ ನಡೆಸುತ್ತಿರುವಾಗಲೇ ಪತ್ನಿಯ ಕೈಗೆ ಸಿಕ್ಕಿ ಬಿದ್ದ ಪ್ರಾಧ್ಯಾಪಕ! | “ರೇಪ್ ಮಾಡ್ದ” ಎಂದಿದ್ದ ವಿದ್ಯಾರ್ಥಿನಿ ಯೂಟರ್ನ್!?

ತನ್ನ ಅಪ್ರಾಪ್ತ ವಯಸ್ಸಿನ ಮಗಳ ಮೇಲೆಯೇ ಅತ್ಯಾಚಾರಕ್ಕೆ ಯತ್ನಿಸಿದ ಮದ್ಯವ್ಯಸನಿ ತಂದೆ!

“ಬಡ ಮಕ್ಕಳ ಮೊಟ್ಟೆ ತಿಂದ ಜೊಲ್ಲೆಗೆ ಝೀರೋ ಟ್ರಾಫಿಕ್ ರಾಜಮರ್ಯಾದೆ!”

ಶಾಕಿಂಗ್ ನ್ಯೂಸ್:  ಬ್ಲೂಟೂತ್ ಹೆಡ್ ಫೋನ್ ಸ್ಫೋಟ ಯುವಕ ದಾರುಣ ಸಾವು

ಸರ್ಕಾರದ ಹಣದಲ್ಲಿ ನಡೆಯುವ ಕ್ಯಾಂಟೀನ್ ಗೆ ಇಂದಿರಾ ಹೆಸರು ಬೇಡ | ಸಿ.ಟಿ.ರವಿ ಕಿಡಿ

ಇತ್ತೀಚಿನ ಸುದ್ದಿ