ಇಬ್ಬರು ಮಕ್ಕಳಿಗೆ ವಿಷವುಣಿಸಿ ದಂಪತಿ ಸಾವಿಗೆ ಶರಣು! - Mahanayaka

ಇಬ್ಬರು ಮಕ್ಕಳಿಗೆ ವಿಷವುಣಿಸಿ ದಂಪತಿ ಸಾವಿಗೆ ಶರಣು!

up family
06/01/2025

ಬೆಂಗಳೂರು: ಇಬ್ಬರು ಮಕ್ಕಳಿಗೆ ವಿಷವುಣಿಸಿ ದಂಪತಿ ತಾವು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ಸದಾಶಿವನಗರದ ಆರ್ ಎಂ ವಿ ಸೆಕೆಂಡ್ ಸ್ಟೇಜ್ ಟೆಂಪಲ್ ರಸ್ತೆಯ ಮನೆಯೊಂದರಲ್ಲಿ ನಡೆದಿದೆ.


Provided by

ಅನುಪ್ ಕುಮಾರ್ (38), ಪತ್ನಿ ರಾಖಿ(35) ಆತ್ಮಹತ್ಯೆ ಮಾಡಿಕೊಂಡಿದ್ದು, 5 ವರ್ಷದ ವಿಶೇಷ ಚೇತನ ಹೆಣ್ಣುಮಗು ಮತ್ತು ಎರಡು ವರ್ಷದ ಗಂಡು ಮಗುವಿಗೆ ವಿಷ ಕುಡಿಸಿದ ಬಳಿಕ ದಂಪತಿ ಸಾವಿಗೆ ಶರಣಾಗಿದ್ದಾರೆ.

ಮೃತರು ಮೂಲತಃ ಉತ್ತರ ಪ್ರದೇಶದವರು ಎಂದು ತಿಳಿದು ಬಂದಿದೆ. ಇಬ್ಬರೂ ಟೆಕ್ಕಿಗಳಾಗಿದ್ದು, ವರ್ಕ್ ಫ್ರಂ ಹೋಮ್ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ. ಸಾಲ ಬಾಧೆಯಿಂದ ನೊಂದು ಸಾವಿಗೆ ಶರಣಾಗಿದ್ದಾರೆ ಎನ್ನಲಾಗಿದೆ. ಸದಾಶಿವನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.


Provided by

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/HEkqDgrW2BlJLad5kZ1DX7

ಇತ್ತೀಚಿನ ಸುದ್ದಿ