ಬೈಕ್ ಸ್ಕಿಡ್ ಆಗಿ ನದಿಗೆ ಬಿದ್ದ ದಂಪತಿಯ ದಾರುಣ ಸಾವು
ಬೆಳಗಾವಿ: ಬೈಕ್ ಸ್ಕಿಡ್ ಆದ ಪರಿಣಾಮ ದಂಪತಿ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ನೊಗನಿಹಾಳ ಗ್ರಾಮದ ಘಟಪ್ರಭಾ ನದಿ ಬಳಿಯ ಸೇತುವೆಯಲ್ಲಿ ನಡೆದಿದೆ.
ಚಿಕ್ಕೋಡಿ ತಾಲೂಕಿನ ಪೊಗತ್ಯಾನಟ್ಟಿ ಗ್ರಾಮದ ಸುರೇಶ ಬಡಿಗೇರ (53), ಜಯಶ್ರೀ ಬಡಿಗೇರ(45) ಮೃತ ದಂಪತಿ ಎಂದು ಗುರುತಿಸಲಾಗಿದೆ.
ಘೋಡಗೇರಿ ಗ್ರಾಮದಿಂದ ಪೊಗತ್ಯಾನಟ್ಟಿ ಗ್ರಾಮಕ್ಕೆ ದಂಪತಿ ಬೈಕ್ ನಲ್ಲಿ ತೆರಳುತ್ತಿದ್ದರು. ನೊಗನಿಹಾಳ ಗ್ರಾಮದ ಬಳಿ ಸೇತುವೆ ದಾಡುತ್ತಿದ್ದ ವೇಳೆ ಬೈಕ್ ಸ್ಕಿಡ್ ಆಗಿದೆ. ಪರಿಣಾಮವಾಗಿ ದಂಪತಿ ನದಿಗೆ ಎಸೆಯಲ್ಪಟ್ಟಿದ್ದು, ದಾರುಣವಾಗಿ ಸಾವನ್ನಪ್ಪಿದ್ದಾರೆ.
ನದಿಯಿಂದ ಜಯಶ್ರೀ ಅವರ ಮೃತದೇಹವನ್ನು ಅಗ್ನಿಶಾಮಕ ದಳದ ಸಿಬ್ಬಂದಿ ಹೊರ ತೆಗೆದಿದ್ದಾರೆ. ಸುರೇಶ್ ಅವರ ಮೃತದೇಹ ಇನ್ನೂ ಸಿಕ್ಕಿಲ್ಲ ಹೀಗಾಗಿ ಮೃತದೇಹಕ್ಕಾಗಿ ಹುಡುಕಾಟ ಮುಂದುವರಿದಿದೆ.
ಸೇತುವೆಗೆ ತಡೆಗೋಡೆ ಇಲ್ಲದಿರುವುದೇ ಈ ದುರ್ಘಟನೆಗೆ ಕಾರಣವಾಗಿದೆ. ನಿರಾವರಿ ಇಲಾಖೆಯ ನಿರ್ಲಕ್ಷ್ಯದ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹುಕ್ಕೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: