ನೆಚ್ಚಿನ ಶಾಸಕನ ನಾಮಪತ್ರ ಸಲ್ಲಿಕೆಗೆ 35 ಕಿ.ಮೀ.ನಡೆದು ಬಂದ ದಂಪತಿ..!
ರಾಜ್ಯ ವಿಧಾನಸಭಾ ಚುನಾವಣೆಯ ಹಿನ್ನಲೆಯಲ್ಲಿ ಶಾಸಕ ರಾಜೇಶ್ ನಾಯ್ಕ್ ಅವರು ನಾಮಪತ್ರ ಸಲ್ಲಿಸಲು ಪೊಳಲಿ ಕ್ಷೇತ್ರದಿಂದ ಪಾದಯಾತ್ರೆಯ ಮೂಲಕ ಆಗಮಿಸಿದರು. ಇದೇ ವೇಳೆ ಈ ಸುದ್ದಿ ತಿಳಿದ ದಂಪತಿ ತಮ್ಮ ಮನೆಯಿಂದ ಸುಮಾರು 35 ಕಿಲೋ ಮೀಟರ್ ದೂರದವರೆಗೆ ಕಾಲ್ನಡಿಗೆಯಲ್ಲಿ ಆಗಮಿಸಿ ಪಕ್ಷದ ಅಭ್ಯರ್ಥಿಗೆ ಶುಭಾಶಯ ಕೋರಿದ ಘಟನೆ ಬಂಟ್ವಾಳದಲ್ಲಿ ನಡೆಯಿತು.
ಬಡಗಕಜೆಕಾರು ಗ್ರಾ.ಪಂ.ಮಾಜಿ ಸದಸ್ಯ ಗಂಗಾಧರ ಪೂಜಾರಿ ಅವರು ತನ್ನ ಪತ್ನಿ ಚಂದ್ರಾವತಿ ಅವರ ಜೊತೆಗೂಡಿ ಕಜೆಕಾರಿನ ಮಹಾದೇಶ್ವರ ದೇವಸ್ಥಾನದಿಂದ ಪಾದಯಾತ್ರೆ ಆರಂಭಿಸಿದರು.
ಪೂಂಜಾಲಕಟ್ಟೆಯಿಂದ ರಾಷ್ಟ್ರೀಯ ಹೆದ್ದಾರಿ ಮೂಲಕ ಬಂದು ಬಿಜೆಪಿ ಅಭ್ಯರ್ಥಿ ರಾಜೇಶ್ ನಾಯ್ಕ್ ಅವರನ್ನು ಭೇಟಿಯಾದರು. ರಾಜೇಶ್ ನಾಯ್ಕ್ ಅವರು ಭ್ರಷ್ಟಾಚಾರ ರಹಿತ ಆಡಳಿತವನ್ನು ತನ್ನ ಶಾಸಕತ್ವದ ಸಮಯದಲ್ಲಿ ನೀಡಿದ್ದು, ಹಲವು ಬಾರಿ ಪಾದಯಾತ್ರೆಯ ಮೂಲಕ ಜನರ ಸಮಸ್ಯೆಗಳನ್ನು ಅರಿತು ಪರಿಹರಿಸುವ ಪ್ರಯತ್ನ ಮಾಡಿದ್ದಾರೆ. ಅವರನ್ನು ಬೆಂಬಲಿಸುವ ಸಲುವಾಗಿ ಕಾಲ್ನಡಿಗೆಯ ಮೂಲಕ ಆಗಮಿಸಿದ್ದೇವೆ ಎಂದು ದಂಪತಿ ತಿಳಿಸಿದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw