ಕೋರ್ಟ್ ಆವರಣದಲ್ಲಿ ಗಲಾಟೆ ಪ್ರಕರಣ: ವಕೀಲ ಜಗದೀಶ್ ಅರೆಸ್ಟ್ - Mahanayaka
4:14 AM Wednesday 11 - December 2024

ಕೋರ್ಟ್ ಆವರಣದಲ್ಲಿ ಗಲಾಟೆ ಪ್ರಕರಣ: ವಕೀಲ ಜಗದೀಶ್ ಅರೆಸ್ಟ್

jagadish
13/02/2022

ಬೆಂಗಳೂರು: ಬೆಂಗಳೂರು ಸಿಟಿ ಸಿವಿಲ್ ಕೋರ್ಟ್ ಆವರಣದಲ್ಲಿ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಕೀಲ ಜಗದೀಶ್ ಅವರನ್ನು ಹಲಸೂರು ಗೇಟ್ ಪೊಲೀಸರು ಬಂಧಿಸಿದ್ದಾರೆ.

ನ್ಯಾಯಾಲಯದ ಆವರಣದಲ್ಲಿ ಗಲಾಟೆಗೆ ಪ್ರಚೋದನೆ ನೀಡಿದ್ದಾರೆ ಎಂದು ಆರೋಪಿಸಲಾಗಿದೆ.  ಪ್ರಕರಣಕ್ಕೆ ಸಂಬಂಧಿಸಿದಂತೆ ವಕೀಲ ಜಗದೀಶ್ ವಿರುದ್ಧ ಬೆಂಗಳೂರು ವಕೀಲರ ಸಂಘದ ಅಧ್ಯಕ್ಷ ವಿವೇಕ್ ರೆಡ್ಡಿ ದೂರು ನೀಡಿದ್ದರು.

ದೂರಿನ ಹಿನ್ನೆಲೆಯಲ್ಲಿ ವಕೀಲ ಜಗದೀಶ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಜಗದೀಶ್ ಅವರನ್ನು ಬಂಧಿಸಿರುವ ಪೊಲೀಸರು ಕೋರಮಂಗಲ ನ್ಯಾಯಾಧೀಶರ ನಿವಾಸದಲ್ಲಿ ಜಡ್ಜ್ ಮುಂದೆ ಹಾಜರುಪಡಿಸಲಿದ್ದಾರೆ.

ವಕೀಲ ಜಗದೀಶ್ ವಿರುದ್ಧ ಎಫ್ ಐ‌ ಆರ್ ದಾಖಲಿಸಲು ಸಿದ್ಧತೆ ನಡೆಸಲಾಗಿದೆ ಎಂದು ತಿಳಿದುಬಂದಿದೆ.

ಕೋರ್ಟ್ ಆವರಣದಲ್ಲಿ ನಡೆದ ಗಲಾಟೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ವಕೀಲ ಜಗದೀಶ್ ಅವರ ಪುತ್ರ ಹಾಗೂ ಅವರ ಬೆಂಬಲಿಗ ವಕೀಲರ ಮೇಲೆ ಒಂದು ಗುಂಪಿನ ವಕೀಲರು ಹಲ್ಲೆ ನಡೆಸುತ್ತಿರುವ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಸಿಡಿದೆದ್ದ ಸಂವಿಧಾನ ಪರ ಸಂಘಟನೆಗಳು:  ಫೆ.19ರಂದು “ವಿಧಾನ ಸೌಧ-ಹೈಕೋರ್ಟ್ ಚಲೋ”ಗೆ ಕರೆ

ಶಾಸಕ ಹಾಲಪ್ಪ, ಬೇಳೂರು ಗೋಪಾಲಕೃಷ್ಣರಿಂದ ಧರ್ಮಸ್ಥಳದಲ್ಲಿ ಆಣೆ ಪ್ರಮಾಣ

ಪೊಲೀಸ್ ಇನ್ಸ್​ಪೆಕ್ಟರ್ ಮೇಲೆಯೇ ಪೆಟ್ರೋಲ್ ಸುರಿದು ಬೆಂಕಿ ಹಚ್ಚಲು ಯತ್ನ

ಮನೆ ಬಿಟ್ಟು ಬಂದಿದ್ದ ಯುವತಿ ಮೇಲೆ ಅತ್ಯಾಚಾರವೆಸಗಿ ಮಾರಾಟಕ್ಕೆ ಯತ್ನ

ಇತ್ತೀಚಿನ ಸುದ್ದಿ