ಉನ್ನಾವೋ ಸಂತ್ರಸ್ತೆಯ ಅಪಘಾತ ಪ್ರಕರಣ: ದೂರುದಾರರ ಆಕ್ಷೇಪಣೆ ರೋಮಾಂಚಕ ಕತೆಯಂತಿವೆ | ದೆಹಲಿ ನ್ಯಾಯಾಲಯ - Mahanayaka

ಉನ್ನಾವೋ ಸಂತ್ರಸ್ತೆಯ ಅಪಘಾತ ಪ್ರಕರಣ: ದೂರುದಾರರ ಆಕ್ಷೇಪಣೆ ರೋಮಾಂಚಕ ಕತೆಯಂತಿವೆ | ದೆಹಲಿ ನ್ಯಾಯಾಲಯ

sengar
01/08/2021


Provided by

ನವದೆಹಲಿ: ಉನ್ನಾವೋ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಹಾಗೂ ಅವರ ಕುಟುಂಬಸ್ಥರು, ವಕೀಲರು ಪ್ರಯಾಣಿಸುತ್ತಿದ್ದ ಕಾರಿಗೆ ಟ್ರಕ್ ಡಿಕ್ಕಿ ಹೊಡೆದು ಸಂತ್ರಸ್ತೆಯ ಇಬ್ಬರು ಚಿಕ್ಕಮ್ಮಂದಿರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆಯನ್ನು ದೆಹಲಿ ನ್ಯಾಯಾಲಯ ಎತ್ತಿ ಹಿಡಿದ್ದು, ಈ ಪ್ರಕರಣದಲ್ಲಿ ಸಿಬಿಐ ಯಾವುದೇ ಲೋಪ ಎಸಗಿರುವುದಕ್ಕೆ ಯಾವುದೇ ಸಾಕ್ಷಿ ಇಲ್ಲ ಎಂದು ಹೇಳಿದೆ.

ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಬಿಜೆಪಿ ಉಚ್ಛಾಟಿತ ಶಾಸಕ ಕುಲದೀಪ್ ಸಿಂಗ್‌ ಸೆಂಗರ್ ಮತ್ತು ಇತರ ಒಂಬತ್ತು ಜನರ ವಿರುದ್ಧ ಸಂತ್ರಸ್ತೆಯ ಕುಟುಂಬದವರು ‘ಅಪಘಾತದ ಪಿತೂರಿ’ ಪ್ರಕರಣ ದಾಖಲಿಸಿದ್ದರಿಂದ ಆರೋಪಿಗಳ ವಿರುದ್ಧ ಕೊಲೆ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದ ವಿಚಾರಣೆ ನಡೆಸಿದ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಧರ್ಮೇಶ್ ಶರ್ಮಾ ಅವರು, ದೂರುದಾರರ ಆಕ್ಷೇಪಣೆಗಳು ರೋಮಾಂಚಕ ಕತೆಯಂತಿವೆ. ಆದರೆ ಅವು ಕೇವಲ ಊಹೆಗಳನ್ನು ಆಧರಿಸಿವೆ ಎಂದು ಆರೋಪಗಳನ್ನು ತಳ್ಳಿಹಾಕಿದರು.

ಸಿಬಿಐ ನಡೆಸಿದ ತನಿಖೆಯ ನಿಷ್ಠೆ, ನಿಖರತೆ ಮತ್ತು ಪ್ರಾಮಾಣಿಕತೆಯನ್ನು ಅನುಮಾನಿಸಲು ಯಾವುದೇ ಆಧಾರಗಳಿಲ್ಲ ಎಂದು ನ್ಯಾಯಾಧೀಶರು ಹೇಳಿದರು. ಈ ಪ್ರಕರಣದಲ್ಲಿ ಕುಲದೀಪ್‌ ಸೆಂಗರ್‌, ಟ್ರಕ್‌ ಚಾಲಕ ಅಥವಾ ಕ್ಲೀನರ್‌ ಅಥವಾ ಟ್ರಕ್‌ ಮಾಲೀಕರ ನಡುವೆ ಕ್ರಿಮಿನಲ್‌ ಪಿತೂರಿ ನಡೆದಿರುವ ಕುರಿತು ಯಾವುದೇ ಪುರಾವೆಗಳು ದೊರೆತಿಲ್ಲ ಎಂದು ಸಿಬಿಐ ವರದಿಯಲ್ಲಿ ಉಲ್ಲೇಖಿಸಿದೆ.

ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಬಿಜೆಪಿ ಉಚ್ಛಾಟಿತ ಶಾಸಕ ಕುಲದೀಪ್ ಸಿಂಗ್‌ ಸೆಂಗರ್ ಮತ್ತು ಇತರ ಒಂಬತ್ತು ಜನರ ವಿರುದ್ಧ ಸಂತ್ರಸ್ತೆಯ ಕುಟುಂಬದವರು ‘ಅಪಘಾತದ ಪಿತೂರಿ’ ಪ್ರಕರಣ ದಾಖಲಿಸಿದ್ದರಿಂದ ಆರೋಪಿಗಳ ವಿರುದ್ಧ ಕೊಲೆ ಪ್ರಕರಣ ದಾಖಲಾಗಿತ್ತು.

ಇನ್ನಷ್ಟು ಸುದ್ದಿಗಳು…

ಸರ್ಕಾರದ ವಿರುದ್ಧ ಸಿಡಿದೆದ್ದ ಖಾಸಗಿ ಶಾಲೆಗಳು: ಅನುಮತಿ ಇಲ್ಲದೆಯೇ ಶಾಲೆ ಆರಂಭಕ್ಕೆ ಮುಂದಾಯ್ತೇ ರುಪ್ಸಾ?

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೆ ಕಠಿಣ ಕ್ರಮಕ್ಕೆ ಸಿಎಂ ಬಸವರಾಜ್ ಬೊಮ್ಮಾಯಿ ಸೂಚನೆ

ಕಾರಾಗೃಹದ ಗೋಡೆ ಕುಸಿದು 22 ಕೈದಿಗಳಿಗೆ ಗಂಭೀರ ಗಾಯ!

ಕುರಿ, ಕೋಳಿ, ಮೀನಿನ ಬದಲು ಗೋಮಾಂಸ ಸೇವಿಸಿ ಎಂದು ಕರೆ ನೀಡಿದ ಬಿಜೆಪಿ ಸಚಿವ!

ಕ್ಯಾನ್ಸರ್ ಪೀಡಿತ ಮಕ್ಕಳಿಗಾಗಿ ರಕ್ತದಾನ ಮಾಡಿದ 75 ಪೊಲೀಸರು

ಕರ್ನಾಟಕ ಸರ್ಕಾರದ ವಿರುದ್ಧ ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ.ಅಣ್ಣಾಮಲೈ ಉಪವಾಸ ಸತ್ಯಾಗ್ರಹ!

ಇತ್ತೀಚಿನ ಸುದ್ದಿ