ನ್ಯಾಯಾಲಯದ 6ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಶರಣಾದ ಫೋಕ್ಸೋ ಪ್ರಕರಣದ ಆರೋಪಿ - Mahanayaka
8:06 PM Wednesday 11 - December 2024

ನ್ಯಾಯಾಲಯದ 6ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಶರಣಾದ ಫೋಕ್ಸೋ ಪ್ರಕರಣದ ಆರೋಪಿ

mangalore news
31/08/2021

ಮಂಗಳೂರು: ಫೋಕ್ಸೋ ಪ್ರಕರಣದ ಆರೋಪಿಯೋರ್ವ ಮಂಗಳೂರು ನ್ಯಾಯಾಲಯದ ಆರನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳವಾರ ಸಂಜೆ ನಡೆದಿದ್ದು, ಪರಿಣಾಮವಾಗಿ  ಗಂಭೀರವಾಗಿ ಗಾಯಗೊಂಡಿದ್ದ ಆರೋಪಿ ಸಾವನ್ನಪ್ಪಿದ್ದಾನೆ.

ಫೋಕ್ಸೋ ಪ್ರಕರಣದ ಆರೋಪಿ ತಲಪಾಡಿ ಕಿನ್ಯ ನಿವಾಸಿ 32 ವರ್ಷ ವಯಸ್ಸಿನ ರವಿರಾಜ್ ಆತ್ಮಹತ್ಯೆಗೆ ಶರಣಾದ ಆರೋಪಿಯಾಗಿದ್ದಾನೆ.  ನ್ಯಾಯಾಲಯದ 6ನೇ ಮಹಡಿಯಿಂದ ಕೆಳಗೆ ಹಾರಿದ ಪರಿಣಾಮ ತಲೆಗೆ ಗಂಭೀರವಾದ ಏಟು ಬಿದ್ದಿದ್ದು, ತೀವ್ರ ರಕ್ತ ಸ್ರಾವದಿಂದ ಆರೋಪಿ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.

ಘಟನಾ ಸ್ಥಳಕ್ಕೆ ಮಂಗಳೂರು ಪೊಲೀಸ್ ಆಯುಕ್ತ ಎನ್,ಶಿವಕುಮಾರ್ ತೆರಳಿ  ಪರಿಶೀಲನೆ ನಡೆಸಿದ್ದಾರೆ. ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪ ಎದುರಿಸುತ್ತಿದ್ದು, ಈ ಸಂಬಂಧ ಪೋಕ್ಸೋ ಪ್ರಕರಣ ದಾಖಲಾಗಿತ್ತು. ಹೀಗಾಗಿ ವಿಚಾರಣೆಗೆ ಆರೋಪಿ ಹಾಜರಾಗಿದ್ದ ಎಂದು ಹೇಳಲಾಗಿದೆ. ಈ ವೇಳೆ ಆರೋಪಿಯು ಆತ್ಮಹತ್ಯೆ ನಡೆಸಿದ್ದಾನೆ.

ಇನ್ನಷ್ಟು ಸುದ್ದಿಗಳು…

ಅಪಘಾತದಲ್ಲಿ ಶಾಸಕರ ಪುತ್ರ ಸೇರಿದಂತೆ 7 ಮಂದಿ ಸಾವು | ಅಪಘಾತಕ್ಕೂ ಮೊದಲು ಎಚ್ಚರಿಕೆ ನೀಡಿದ್ದ ಪೊಲೀಸರು

ವಿಪರೀತ ವೇಗದಿಂದ ಬಂದು ಕಾಂಪೌಂಡ್ ಗೆ ಡಿಕ್ಕಿ ಹೊಡೆದ ಕಾರು: 7 ಮಂದಿ ಬಲಿ

ಅಫ್ಘಾನಿಸ್ತಾನ ತೊರೆದ ಅಮೆರಿಕ ಸೇನೆ: ಆಗಸಕ್ಕೆ ಗುಂಡು ಹಾರಿಸಿ ಸಂಭ್ರಮಿಸಿದ ತಾಲಿಬಾನಿಗರು

ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ 7 ಬಾಲಕರಿಂದ ಸಾಮೂಹಿಕ ಅತ್ಯಾಚಾರ!

ಮಹಿಳಾ ರೋಗಿಗೆ ಲೈಂಗಿಕ ದೌರ್ಜನ್ಯ ನೀಡಿ ಹತ್ಯೆಗೆ ಯತ್ನಿಸಿದ ವಾರ್ಡ್ ಬಾಯ್

ಇತ್ತೀಚಿನ ಸುದ್ದಿ