ಕೊನೆಗೂ ಕೋರ್ಟ್ ನಲ್ಲಿ ಹೇಳಿಕೆ ದಾಖಲಿಸಿದ ಮೈಸೂರು ಸಾಮೂಹಿಕ ಅತ್ಯಾಚಾರ ಪ್ರಕರಣದ ಸಂತ್ರಸ್ತೆ - Mahanayaka

ಕೊನೆಗೂ ಕೋರ್ಟ್ ನಲ್ಲಿ ಹೇಳಿಕೆ ದಾಖಲಿಸಿದ ಮೈಸೂರು ಸಾಮೂಹಿಕ ಅತ್ಯಾಚಾರ ಪ್ರಕರಣದ ಸಂತ್ರಸ್ತೆ

mysore case
22/09/2021

ಮೈಸೂರು: ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ನಡೆದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತ ಯುವತಿಯು ಕೊನೆಗೂ ತನ್ನ ಹೇಳಿಕೆಯನ್ನು ದಾಖಲಿಸಿದ್ದಾರೆ ಎಂದು ಕನ್ನಡ ಸುದ್ದಿವಾಹಿನಿಯೊಂದು ವರದಿ ಮಾಡಿದೆ.

ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಗೆಳೆಯೊಂದಿಗೆ ವಾಯು ವಿಹಾರಕ್ಕೆಂದು ಹೋಗಿದ್ದ ವಿದ್ಯಾರ್ಥಿನಿಯ ಮೇಲೆ 7 ಮಂದಿ ಆರೋಪಿಗಳು ಸಾಮೂಹಿಕ ಅತ್ಯಾಚಾರ ನಡೆಸಿದ್ದು, ಸಂತ್ರಸ್ತೆಯ ಜೊತೆಗಿದ್ದ ಗೆಳೆಯನಿಗೂ ಹಲ್ಲೆ ನಡೆಸಲಾಗಿತ್ತು.

ಈ ಪ್ರಕರಣ ನಡೆದ ಕೆಲವೇ ದಿನಗಳಲ್ಲಿ ಮೈಸೂರು ಪೊಲೀಸರು ಆರೋಪಿಗಳನ್ನು ಬಂಧಿಸಿದ್ದರು. ಆದರೆ, ಸಂತ್ರಸ್ತೆಯು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹೇಳಿಕೆ ನೀಡಲು ಹಿಂಜರಿದಿದ್ದರು. ಇದು ಈ ಪ್ರಕರಣದ ಆರೋಪಿಗಳಿಗೆ ಶಿಕ್ಷೆ ನೀಡಲು ಹಿನ್ನಡೆ ಉಂಟು ಮಾಡುವ ಆತಂಕವನ್ನು ಸೃಷ್ಟಿಸಿತ್ತು.

ಆದರೆ, ಇದೀಗ ಮೈಸೂರಿನ ಮೂರನೇ ಜೆಎಂಎಫ್ ಸಿ ಕೋರ್ಟ್ ಗೆ ಹಾಜರಾಗಿರುವ ಸಂತ್ರಸ್ತೆ, ನ್ಯಾಯಾಧೀಶರ ಮುಂದೆ ಹೇಳಿಕೆ ದಾಖಲಿಸಿದ್ದಾರೆ ಎಂದು ವರದಿಯಾಗಿದ್ದು, ಒಟ್ಟು 168 ಹೇಳಿಕೆಗಳನ್ನು ಸಂತ್ರಸ್ತೆ ದಾಖಲಿಸಿದ್ದಾರೆ ಎಂದು ವರದಿಯಿಂದ ತಿಳಿದು ಬಂದಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/HpGUvPNd4TWBQJG8MXH5on

ಇನ್ನಷ್ಟು ಸುದ್ದಿಗಳು…

ಮದುವೆಯಾದ ಕೆಲವೇ ಹೊತ್ತಿನಲ್ಲಿ ಪ್ರೇಮಿಯೊಂದಿಗೆ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಪೋಷಕರು!

ಗೆಳೆಯನ ಜೊತೆಗೆ ಗೋವಾ ಪ್ರವಾಸಕ್ಕೆ ತೆರಳಿದ್ದ ನಟಿ ಕಾರು ಅಪಘಾತದಲ್ಲಿ ದಾರುಣ ಸಾವು!

ಗೋಬಿ ಮಂಚೂರಿ, ಎಗ್ ರೈಸ್ ಕೊಡಿಸುವ ನೆಪದಲ್ಲಿ ಬಾಲಕಿಯ ಮೇಲೆ ಅತ್ಯಾಚಾರ!

ಜಾತಿ ಪೀಡೆಗಳನ್ನು ಮಟ್ಟ ಹಾಕಲು ನಡೆಯಲಿದೆ ಗುಪ್ತ ಸಮೀಕ್ಷೆ: ಅಸ್ಪೃಶ್ಯತೆ ಆಚರಿಸಿದರೆ ಜೈಲೂಟ ಗ್ಯಾರೆಂಟಿ

ಬಸ್ಸಿನಲ್ಲಿ ವಿದ್ಯಾರ್ಥಿನಿಗೆ ಮುತ್ತಿಟ್ಟವ ಈಗ ಪೊಲೀಸರ ವಶದಲ್ಲಿ: ಪೊಲೀಸರೆದು ಕಣ್ಣೀರಿಟ್ಟು ಆರೋಪಿ ಹೇಳಿದ್ದೇನು?

ಮಲ್ಪೆ ಬೀಚ್ ನಲ್ಲಿ ನೀರಿನ ಸೆಳೆತಕ್ಕೆ ಸಿಲುಕಿದ ಮೂವರು ಪ್ರವಾಸಿಗರು

ಪಾರ್ಟಿ ಮುಗಿಸಿ ಬರುತ್ತಿದ್ದ ಯುವತಿಯ ಮೇಲೆ ಕ್ಯಾಬ್ ಡ್ರೈವರ್ ನಿಂದ ಅತ್ಯಾಚಾರ!

ಬಸ್ಸಿನಲ್ಲಿ ವಿದ್ಯಾರ್ಥಿನಿಗೆ ಮುತ್ತಿಟ್ಟವ ಈಗ ಪೊಲೀಸರ ವಶದಲ್ಲಿ: ಪೊಲೀಸರೆದು ಕಣ್ಣೀರಿಟ್ಟು ಆರೋಪಿ ಹೇಳಿದ್ದೇನು?

ಇತ್ತೀಚಿನ ಸುದ್ದಿ