ನೀತಿ ಸಂಹಿತೆ ಉಲ್ಲಂಘನೆ: ಮೈತ್ರಿ ಅಭ್ಯರ್ಥಿ ಕೋಟಾ ಶ್ರೀನಿವಾಸ್ ಪೂಜಾರಿಗೆ ಕೋರ್ಟ್ ಸಮನ್ಸ್
ಬೆಂಗಳೂರು: ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮಾಡಿದ ಆರೋಪದ ಹಿನ್ನೆಲೆ ಉಡುಪಿ—ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ—ಜೆಡಿಎಸ್ ಮೈತ್ರಿ ಅಭ್ಯರ್ಥಿ ಕೋಟಾ ಶ್ರೀನಿವಾಸ್ ಪೂಜಾರಿ ಅವರ ವಿರುದ್ಧ ಕೋರ್ಟ್ ಸಮನ್ಸ್ ಜಾರಿ ಮಾಡಿದೆ.
ಕೋಟಾ ಶ್ರೀನಿವಾಸ್ ಪೂಜಾರಿ, ಗುರುಮೆ ಸುರೇಶ್ ಶೆಟ್ಟಿ, ಲಾಲಾಜಿ ಮೆಂಡನ್ ಹಾಗೂ ಶಾಲಾ ಆಡಳಿತ ಮಂಡಳಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ.
ಮಾರ್ಚ್ 30ರಂದು ಕಟಪಾಡಿಯ ಖಾಸಗಿ ಕಾಲೇಜು ಆವರಣದಲ್ಲಿ ಚುನಾವಣಾ ಅಧಿಕಾರಿಗಳ ಅನುಮತಿ ಪಡೆಯದೇ ರಾಜಕೀಯ ಭಾಷಣ ಮಾಡಿರುವ ಹಿನ್ನೆಲೆಯಲ್ಲಿ, ನೀತಿ ಸಂಹಿತೆ ಉಲ್ಲಂಘನೆ ಅಡಿಯಲ್ಲಿ ಖಾಸಗಿ ದೂರು ದಾಖಲಾಗಿದ್ದು. ಈ ಹಿನ್ನೆಲೆಯಲ್ಲಿ ಸಮನ್ಸ್ ಜಾರಿ ಮಾಡಿರುವ ಕೋರ್ಟ್ ಮೇ 27ಕ್ಕೆ ವಿಚಾರಣೆ ಮುಂದೂಡಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth