ಕೊವಿಡ್ ನಂತರ ಆತಂಕ ಸೃಷ್ಟಿಸಿದ ಹಕ್ಕಿ ಜ್ವರ! - Mahanayaka
3:58 AM Wednesday 11 - December 2024

ಕೊವಿಡ್ ನಂತರ ಆತಂಕ ಸೃಷ್ಟಿಸಿದ ಹಕ್ಕಿ ಜ್ವರ!

bird fever
18/02/2022

ಮುಂಬೈ: ಕೊವಿಡ್ ನಂತರ ಇದೀಗ ದೇಶದಲ್ಲಿ ಹಕ್ಕಿ ಜ್ವರದ ಆತಂಕ ಎದುರಾಗಿದ್ದು, ಮಹಾರಾಷ್ಟ್ರದ ಥಾಣೆಯಲ್ಲಿ ಹಕ್ಕಿ ಜ್ವರ ಪೀಡಿತ ಕೋಳಿ ಫಾರಂನ ಒಂದು ಕಿ.ಮೀ. ವ್ಯಾಪ್ತಿಯ ಫಾರಂಗಳ 25 ಸಾವಿರಕ್ಕೂ ಅಧಿಕ ಕೋಳಿಗಳನ್ನು ಕೊಲ್ಲಲು ನಿರ್ಧರಿಸಲಾಗಿದೆ.

ಥಾಣೆ ಜಿಲ್ಲೆಯ ಶಹಾಪುರ ತಹಸಿಲ್‌ನ ವೆಹ್ಲೋಲಿ ಗ್ರಾಮದ ಫಾರಂನಲ್ಲಿ ಸುಮಾರು 100 ಕೋಳಿಗಳು ಹಠಾತ್ತನೆ ಸಾವನ್ನಪ್ಪಿದ್ದು, ಹೀಗಾಗಿ ಈ ಮುಂಜಾಗೃತ ಕ್ರಮಗಳನ್ನು ಕೈಗೊಳ್ಳಲು ನಿರ್ಧರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಥಾಣೆ ಜಿಲ್ಲಾ ಮ್ಯಾಜಿಸ್ಟ್ರೇಟ್ ಮತ್ತು ಜಿಲ್ಲಾಧಿಕಾರಿ ರಾಜೇಶ್ ಜೆ. ನಾರ್ವೇಕರ್ ಅವರು,  ಸೋಂಕನ್ನು ನಿಯಂತ್ರಿಸಲು ಕ್ರಮಗಳನ್ನು ತೆಗೆದುಕೊಳ್ಳುವಂತೆ ಜಿಲ್ಲಾ ಪಶುಸಂಗೋಪನಾ ಇಲಾಖೆಗೆ ಆದೇಶಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Bk3PAoJFRvJLUSBPd39m1C

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಮಾಟಗಾತಿ ಎಂದು ಆರೋಪಿಸಿ ಮಹಿಳೆಯನ್ನು ಜೀವಂತವಾಗಿ ಸುಟ್ಟ ಗ್ರಾಮಸ್ಥರು!

ತಾಯಿಯ ಮೇಲೆ ಜೀಪ್ ಹರಿಸಿ ಭೀಕರವಾಗಿ ಹತ್ಯೆ ಮಾಡಿದ ಪಾಪಿ ಪುತ್ರ

ಚುನಾವಣೆ ಪ್ರಚಾರ ಮಾಡುತ್ತಿದ್ದ ವೇಳೆ ಅಭ್ಯರ್ಥಿ ಹೃದಯಾಘಾತದಿಂದ ಸಾವು

ಮರಕ್ಕೆ ಡಿಕ್ಕಿ ಹೊಡೆದ ಬೈಕ್: ಬೈಕ್ ಸವಾರನ ದಾರುಣ ಸಾವು

ಹಿಜಾಬ್ , ಜನಿವಾರ, ಕುಂಕುಮ, ಲಿಂಗ, ಕ್ರಾಸ್ ಶಾಲೆಯಿಂದ ಹೊರಗಿಡಿ | ನಟ ಚೇತನ್ ಅಹಿಂಸಾ ಒತ್ತಾಯ

 

ಇತ್ತೀಚಿನ ಸುದ್ದಿ