ಕೊವಿಡ್ ನಿಂದ ಗುಣಮುಖರಾದವರಲ್ಲಿ ಕ್ಷಯ ರೋಗ ಪತ್ತೆ!
ಬೆಂಗಳೂರು: ಕೋವಿಡ್ ನಿಂದ ಗುಣಮುಖರಾದ ವ್ಯಕ್ತಿಗಳು ಹಾಗೂ ಅವರ ಕುಟುಂಬ ಸದಸ್ಯರಿಗೆ ಸಕ್ರಿಯ ಕ್ಷಯ ರೋಗ ಪತ್ತೆ ಆಂದೋಲನವನ್ನು ಆ.31ರವರೆಗೆ ಹಮ್ಮಿಕೊಳ್ಳಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ತಿಳಿಸಿದ್ದಾರೆ.
ಈ ಸಂಬಂಧ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊಡಗು, ಮಂಡ್ಯ, ಚಾಮರಾಜನಗರ ಹಾಗೂ ಮೈಸೂರಿನಲ್ಲಿ ಕೋವಿಡ್ ಸೋಂಕಿನಿಂದ ಗುಣಮುಖರಾದ 24 ಮಂದಿಯಲ್ಲಿ ಕ್ಷಯ ರೋಗ ಪತ್ತೆಯಾಗಿದೆ. ಹೀಗಾಗಿ ನಿನ್ನೆಯಿಂದ ಕ್ಷಯ ರೋಗ ಪತ್ತೆ ಆಂದೋಲನವನ್ನು ಹಮ್ಮಿಕೊಳ್ಳಲಾಗಿದೆ ಎಂದು ಅವರು ಮಾಹಿತಿ ನೀಡಿದರು.
ರಾಜ್ಯದಲ್ಲಿ ಈಗಾಗಲೇ 28 ಲಕ್ಷಕ್ಕೂ ಹೆಚ್ಚು ಮಂದಿ ಕೋವಿಡ್ ಸೋಂಕಿನಿಂದ ಗುಣಮುಖರಾಗಿದ್ದಾರೆ. ಅವರಲ್ಲಿ ಕಪ್ಪು ಶಿಲೀಂಧ್ರ ಪತ್ರೆ ಮಾಡುವ ರೀತಿಯಲ್ಲಿ ಕ್ಷಯರೋಗದ ತಪಾಸಣೆ ಮಾಡಲಾಗುವುದು. ಕ್ಷಯ ರೋಗವು ಶ್ವಾಸಕೋಶ ಸಮಸ್ಯೆಯಿಂದ ಬರಲಿದೆ. ಕೋವಿಡ್‍ನಿಂದಲೂ ಶ್ವಾಸಕೋಶ ಸಮಸ್ಯೆ ಉಂಟಾಗುತ್ತದೆ. ಹೀಗಾಗಿ ಕ್ಷಯ ರೋಗ ವ್ಯಾಪಕವಾಗಿ ಹರಡದಂತೆ ತಪಾಸಣೆ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ ಎಂದರು.
ಕೋವಿಡ್‍ನಿಂದ ಗುಣಮುಖರಾದವರು ಸ್ವ ಪ್ರೇರಣೆಯಿಂದ ಕ್ಷಯ ರೋಗ ತಪಾಸಣೆಗೆ ಒಳಗಾಗಬೇಕು. ಆರಂಭದಲ್ಲೇ ರೋಗ ಪತ್ತೆಹಚ್ಚಿದರೆ ಆರು ತಿಂಗಳು ಉಚಿತ ಚಿಕಿತ್ಸೆ ಮೂಲಕ ಗುಣಪಡಿಸಬಹುದು ಎಂದು ಅವರು ಇದೇ ವೇಳೆ ತಿಳಿಸಿದರು.
ಇನ್ನಷ್ಟು ಸುದ್ದಿಗಳು…
ತಮಿಳುನಾಡಿನಂತೆ ಕರ್ನಾಟಕದಲ್ಲಿಯೂ ಪೆಟ್ರೋಲ್ ಬೆಲೆ ಇಳಿಕೆಯಾಗುತ್ತಾ? | ಸಿಎಂ ಬೊಮ್ಮಾಯಿ ಹೇಳಿದ್ದೇನು?
ಚಲಿಸುತ್ತಿದ್ದ ಬಸ್ಸಿನ ಮೇಲೆ ಬಿದ್ದ ತೆಂಗಿನ ಮರ | ಕ್ಷಣ ಮಾತ್ರದಲ್ಲೇ ಮರದಲ್ಲಿದ್ದ ಎಳೆನೀರು ಖಾಲಿ!
ಕಾಬುಲ್ ನ ಅಮ್ಯೂಸ್ಮೆಂಟ್ ಪಾರ್ಕ್ ಗೆ ನುಗ್ಗಿ ಮಕ್ಕಳ ಆಟಿಕೆ ಕಾರಿನಲ್ಲಿ ಆಟವಾಡಿದ ಉಗ್ರರು
ಕಮಿಷನರ್ ಗೆ ವಾಯ್ಸ್ ಮೆಸೇಜ್ ಕಳುಹಿಸಿ ಆತ್ಮಹತ್ಯೆಗೆ ಶರಣಾದ ದಂಪತಿ: ಕೊನೆಯ ಸಂದೇಶದಲ್ಲಿತ್ತು ಮನಕಲಕುವ ನೋವು
ಮಂಗಳೂರಿನಲ್ಲಿ 1,725 ಕೆ.ಜಿ. ಅಪಾಯಕಾರಿ ಸ್ಫೋಟಕ ಪತ್ತೆ! | ಆರೋಪಿ ಅರೆಸ್ಟ್