ಕೊವಿಡ್ ನಿಂದ ಮೃತಪಟ್ಟವರ ಕುಟುಂಬಕ್ಕೆ 5 ಲಕ್ಷ ಪರಿಹಾರ ನೀಡಬೇಕು | ಸಿದ್ದರಾಮಯ್ಯ ಆಗ್ರಹ - Mahanayaka

ಕೊವಿಡ್ ನಿಂದ ಮೃತಪಟ್ಟವರ ಕುಟುಂಬಕ್ಕೆ 5 ಲಕ್ಷ ಪರಿಹಾರ ನೀಡಬೇಕು | ಸಿದ್ದರಾಮಯ್ಯ ಆಗ್ರಹ

siddaramaiha
15/06/2021

ಬೆಂಗಳೂರು:  ಕೊರೊನಾ ಸೋಂಕಿನಿಂದ ಮೃತಪಟ್ಟವರ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ನೀಡುವಂತೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯಿಸಿದ್ದು, ಮೃತರ ಕುಟುಂಬಕ್ಕೆ 1 ಲಕ್ಷ ಕೊಡುವ ನಿರ್ಧಾರ ಮಾಡಿರುವುದು ಸರಿಯಲ್ಲ 5 ಲಕ್ಷ ರೂ. ನೀಡಬೇಕು ಎಂದು ಹೇಳಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಮೃತರ ಕುಟುಂಬಕ್ಕೆ 1 ಲಕ್ಷ ಕೊಡುವ ನಿರ್ಧಾರ ಮಾಡಿರುವುದು ಸರಿಯಲ್ಲ 5 ಲಕ್ಷ ರೂ. ನೀಡಬೇಕು ಎಂದು ಒತ್ತಾಯಿಸಿದ್ದಾರೆ. ಹಾಗೆಯೇ ಕೊರೊನಾ ಸೋಂಕನ್ನು ರಾಷ್ಟ್ರೀಯ ವಿಪತ್ತು ಎಂದು ಪರಿಗಣಿಸಿ ಅದರ ನಿಯಮದಂತೆ ಪರಿಹಾರ ಒದಗಿಸಬೇಕು ಎಂದು ಅವರು ಹೇಳಿದ್ದಾರೆ.

ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ನೀಡಲು ಸಾಧ್ಯವಿದೆ. ಕೇಂದ್ರಕ್ಕೆ ಮನವರಿಕೆ ಮಾಡಿ, ಈ ಅವಕಾಶ ಬಳಸಿಕೊಳ್ಳಬೇಕು ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಕೋವಿಡ್ ಸೊಂಕಿನಿಂದ ದುಡಿಯುವ ವ್ಯಕ್ತಿಗಳು ಮೃತ ಪಟ್ಟು ಅನೇಕ ಕುಟುಂಬಗಳು ಕಷ್ಟಪಡುತ್ತಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಇತ್ತೀಚಿನ ಸುದ್ದಿ