ಕೊವಿಡ್ ನಿಯಮ ಉಲ್ಲಂಘನೆ ಆರೋಪ | ಡಿ.ಕೆ.ಶಿವಕುಮಾರ್ ಗೆ 10 ಸಾವಿರ ₹ ದಂಡ
02/06/2021
ಹುಬ್ಬಳ್ಳಿ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಕೊವಿಡ್ ನಿಯಮ ಉಲ್ಲಂಘನೆಯ ಆರೋಪದ ಮೇಲೆ ಹುಬ್ಬಳ್ಳಿ –ಧಾರವಾಡ ಮಹಾನಗರ ಪಾಲಿಕೆ 10 ಸಾವಿರ ₹ ದಂಡ ವಿಧಿಸಿದೆ.
ಡಿ.ಕೆ.ಶಿವಕುಮಾರ್ ಅವರು ಮೇ 31ರಂದು ಇಲ್ಲಿನ ಕೇಶ್ವಾಪುರದ ಸರ್ವೋದಯ ವೃತ್ತದ ಬಳಿಯ ಮದರ್ ತೆರೆಸಾ ಪ್ರತಿಮೆ ಬಳಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು, ಈ ವೇಳೆ ಆಂಬುಲೆನ್ಸ್ ಹಾಗೂ ಕೊವಿಡ್ ಸೇವಾ ವಾಹನ, ಆಕ್ಸಿಜನ್ ಮತ್ತಿತರ ಸೌಲಭ್ಯಗಳಿಗೆ ಚಾಲನೆ ನೀಡಿದ್ದರು.
ಕಾರ್ಯಕ್ರಮದ ವೇಳೆ ಜನ ಸೇರಿದ್ದರು, ದೈಹಿಕ ಅಂತರ ಕಾಪಾಡಿಲ್ಲ, ಅನುಮತಿ ಇಲ್ಲದೆ ಬ್ಯಾನರ್, ಬಂಟಿಂಗ್ ಹಾಕಲಾಗಿದೆ ಎಂದು ಆರೋಪಿಸಿ ಮಹಾನಗರ ಪಾಲಿಕೆ 10 ಸಾವಿರ ರೂಪಾಯಿ ದಂಡ ವಿಧಿಸಿದೆ. ಕೊವಿಡ್ ನಿಯಮ ಉಲ್ಲಂಘನೆಯ ಕಾರಣಕ್ಕಾಗಿ ಈ ಕ್ರಮವನ್ನು ಕೈಗೊಳ್ಳಲಾಗಿದೆ ಎಂದು ಪಾಲಿಕೆ ಪರಿಸರ ಎಂಜಿನಿಯರ್ ನಯನ ಅವರು ತಿಳಿಸಿರುವುದಾಗಿ ವರದಿಯಾಗಿದೆ.