ಕೊವಿಡ್ 19 ನಿಯಂತ್ರಣಕ್ಕೆ ಸಂಬಂಧಿಸಿದಂತೆ ಮಹತ್ವದ ಕ್ರಮ: ಸಿಎಂ ಬೊಮ್ಮಾಯಿ ಹೇಳಿದ್ದೇನು? - Mahanayaka
10:21 PM Thursday 14 - November 2024

ಕೊವಿಡ್ 19 ನಿಯಂತ್ರಣಕ್ಕೆ ಸಂಬಂಧಿಸಿದಂತೆ ಮಹತ್ವದ ಕ್ರಮ: ಸಿಎಂ ಬೊಮ್ಮಾಯಿ ಹೇಳಿದ್ದೇನು?

cm bommai
08/12/2021

ಬೆಂಗಳೂರು: ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಮತ್ತು ತಜ್ಞರ ಜೊತೆ ಚರ್ಚಿಸಿದ ಬಳಿಕ ರಾಜ್ಯದಲ್ಲಿ ಕಠಿಣ ನಿಯಮಗಳನ್ನು ಜಾರಿ ಮಾಡುವ ಬಗ್ಗೆ ನಾಳಿನ ಸಚಿವ ಸಂಪುಟದಲ್ಲಿ ಚರ್ಚಿಸಿ ಸೂಕ್ತ ನಿರ್ಧಾರವನ್ನು ತೆಗೆದುಕೊಳ್ಳುವುದಾಗಿ ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದರು.

ಮಾಧ್ಯಮಗಳ ಜೊತೆಗೆ ಈ ಬಗ್ಗೆ ಮಾತನಾಡಿದ ಅವರು, ಇಂದು ಔಪಾಚಾರಿಕವಾಗಿ ತಜ್ಞರ ಜೊತೆ ಚರ್ಚೆ ನಡೆಸಲಿದ್ದೇನೆ. ಓಮಿಕ್ರಾನ್ ಮತ್ತು ಕೋವಿಡ್ ಸೋಂಕಿನ ಬಗ್ಗೆ ಚರ್ಚೆ ಮಾಡಲಾಗುವುದು. ಕ್ಲಸ್ಟರ್‍ಗೆ  ಮಾರ್ಗಸೂಚಿ ಹೊರಡಿಸುವ ಬಗ್ಗೆ ಸೂಕ್ತವಾದ ನಿರ್ಧಾರವನ್ನು ಕೈಗೊಳ್ಳುವುದಾಗಿ ತಿಳಿಸಿದರು.

ನಾಳೆ ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ತೀರ್ಮಾನಿಸಲಾಗುವುದು. ಜನರ ಆರೋಗ್ಯ ಮತ್ತು ಸಾರ್ವಜನಿಕರ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ನಿರ್ಧರಿಸುತ್ತೇವೆ ಎಂದರು. ತಜ್ಞರು ಯಾವೆಲ್ಲ ಸಲಹೆಗಳನ್ನು ನೀಡುತ್ತಾರೋ ನೋಡಬೇಕು ಎಂದರು.

ಕ್ರಿಸ್‍ಮಸ್ ಮತ್ತು ಹೊಸ ವರ್ಷಾಚರಣೆ ಬರುತ್ತಿರುವುದು ನಮ್ಮ ಗಮನದಲ್ಲಿದೆ. ಅದರ ಬಗ್ಗೆ ಇನ್ನು ಯಾವುದೇ ರೀತಿಯ ತೀರ್ಮಾನ ಮಾಡಿಲ್ಲ. ಸೂಕ್ತ ಸಂದರ್ಭದಲ್ಲಿ ಸರಿಯಾದ ನಿರ್ಧಾರವನ್ನು ತೆಗೆದುಕೊಳ್ಳುವುದಾಗಿ ಹೇಳಿದರು.




ವಸತಿ ಶಾಲೆಗಳಲ್ಲಿ ಮಕ್ಕಳಿಗೆ ಕೋವಿಡ್ ಸೋಂಕು ಅಲ್ಲಲ್ಲಿ ಕಾಣಿಸಿಕೊಳ್ಳುತ್ತದೆ. ಇದನ್ನು ನಿಯಂತ್ರಿಸಲು ಯಾವೆಲ್ಲ ಪರಿಹಾರ ಕೈಗೊಳ್ಳಬೇಕೋ ಎಂಬುದರ ಬಗ್ಗೆ ಚರ್ಚೆ ಮಾಡಲಾಗುವುದು. ಸರ್ಕಾರ ಪರಿಸ್ಥಿತಿಯನ್ನು ನಿಭಾಯಿಸಲು ಎಲ್ಲ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ ಎಂದು ಅವರು ಇದೇ ಸಂದರ್ಭದಲ್ಲಿ ತಿಳಿಸಿದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ನನ್ನ ಅಸಮಾಧಾನ ‘ಮೋದಿಯ ನೀತಿ’ಗಳ ವಿರುದ್ಧ, ಬಿಜೆಪಿಯ ವಿರುದ್ಧವಲ್ಲ | ಮಂಗಳೂರಿನಲ್ಲಿ ಡಾ.ಸುಬ್ರಮಣಿಯನ್ ಸ್ವಾಮಿ ಹೇಳಿಕೆ

ನಡು ರಸ್ತೆಯಲ್ಲೇ ಟ್ರಾಫಿಕ್ ಪೊಲೀಸ್, ಕಂಡೆಕ್ಟರ್ ನಡುವೆ ಹೊಡೆದಾಟ! | ವಿಡಿಯೋ ವೈರಲ್

ಸರ್ಕಾರಿ ಶಾಲೆಗಳ ಹೀನಾಯ ಸ್ಥಿತಿಯ ಬಗ್ಗೆ ಧ್ವನಿ ಎತ್ತದ ಸ್ವಾಮೀಜಿಗಳು ಮೊಟ್ಟೆಗೆ ವಿರೋಧ ಮಾಡ್ತಿದ್ದಾರೆ!

ಗಗನಕ್ಕೇರಿದ ಟೊಮೆಟೋ ಬೆಲೆ: ಗ್ರಾಹಕನ ಜೇಬಿಗೆ ಕತ್ತರಿ ಹಾಕುತ್ತಿರುವ ತರಕಾರಿ!

ನಮಗೆ ಕಾಂಗ್ರೆಸ್ ನವರ ಪ್ರಮಾಣ ಪತ್ರ ಬೇಕಾಗಿಲ್ಲ | ಸಿಎಂ ಬಸವರಾಜ ಬೊಮ್ಮಾಯಿ

ಬಿಜೆಪಿ ಕಾರ್ಯಕರ್ತನ ಕಿರುಕುಳದಿಂದ ಬೇಸತ್ತು ಬೆಂಕಿ ಹಚ್ಚಿಕೊಂಡು ತಾಯಿ ಮಗ ಆತ್ಮಹತ್ಯೆ

ಇತ್ತೀಚಿನ ಸುದ್ದಿ