ಬಸವಣ್ಣರಿಂದ ಜಗತ್ತಿನ ಮೊದಲ ಸಂಸತ್ ರಚನೆ: ಪ್ರಸನ್ನ ಎಚ್. - Mahanayaka

ಬಸವಣ್ಣರಿಂದ ಜಗತ್ತಿನ ಮೊದಲ ಸಂಸತ್ ರಚನೆ: ಪ್ರಸನ್ನ ಎಚ್.

udupi
24/04/2023

ಉಡುಪಿ: ಜಗತ್ತಿನಲ್ಲಿ ಪ್ರಥಮ ಸಂಸತ್ತು ಎಂಬ ಹೆಗ್ಗಳಿಕೆಗೆ ಪಾತ್ರ ವಾದ ಅನುಭವ ಮಂಟಪವನ್ನು ಬಸವಣ್ಣ ರಚಿಸುವ ಮೂಲಕ ಸರ್ವ ಜನಾಂಗದ ಶ್ರೇಯಾಭಿವೃದ್ಧಿಗೆ ಸ್ತ್ರಿ ಪುರುಷರೆಂಬ ತಾರತಮ್ಯವಿಲ್ಲದೆ  ಮುಕ್ತ ವಾತಾವರಣವನ್ನು ಕಲ್ಪಿಸಿದರು. ಈ ಮೂಲಕ ಅವರು ಜಗತ್ತಿನ ಪ್ರಥಮ ಪ್ರಜಾಪ್ರಭುತ್ವಕ್ಕೆ ಮಾದರಿಯಾದವರು ಎಂದು ಉಡುಪಿ ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಎಚ್. ಹೇಳಿದ್ದಾರೆ.

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಇಂದು ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾದ ಬಸವ ಜಯಂತಿ ಕಾರ್ಯಕ್ರಮದಲ್ಲಿ ಬಸವಣ್ಣನವರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು ಅವರು ಮಾತನಾಡುತಿದ್ದರು.

ತಾವು ಈ ಹಿಂದೆ ಬಸವ ಕಲ್ಯಾಣದಲ್ಲಿ ಕೆಲಸ ನಿರ್ವಹಿಸಲು ಸಿಕ್ಕ ಅವಕಾಶ ವನ್ನು ಸ್ಮರಿಸಿಕೊಂಡು, ಬಸವಕಲ್ಯಾಣದಲ್ಲಿ ಇರುವ ಬಸವಣ್ಣ ಅಭಿವೃದ್ಧಿ ಪ್ರಾಧಿಕಾರದ ಮೂಲಕ ಸರಕಾರದ ವತಿಯಿಂದ ಬಸವಣ್ಣನವರನ್ನು ಮುಂದಿನ ಪೀಳಿಗೆಗೆ ತಿಳಿಸುವ ಅಭಿವೃದ್ಧಿ ಕೆಲಸಗಳು ಆಗುತ್ತಿದೆ ಎಂದರು.

ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್. ಮಾತನಾಡಿ, ಬಸವಣ್ಣ ಅವರ ಕಾಯಕ ತತ್ವ ಹಾಗೂ ದಾಸೋಹ ತತ್ವ ಇಂದಿನ ಮಟ್ಟಿಗೆ ತುಂಬಾ ಪ್ರಸ್ತುತ. ಬಸವಣ್ಣನವರ ತತ್ವದಂತೆ ಅಂತರಂಗ ಶುದ್ಧರಾಗಿ ಎಲ್ಲರೂ ಕೆಲಸ ನಿರ್ವಹಿಸುವುದರಿಂದ ಉತ್ತಮ ಸಮಾಜ ನಿರ್ಮಾಣವಾಗಲು ಸಾಧ್ಯ ಎಂದು ತಿಳಿಸಿದರು.

ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತ್ ಅಧ್ಯಕ್ಷ ಸುರೇಂದ್ರ ಅಡಿಗ ಶುಭ ಹಾರೈಸಿದರು. ಅಖಿಲ ಭಾರತ ವೀರಶೈವ ಮಹಾಸಭಾ ಜಿಲ್ಲಾ ಅಧ್ಯಕ್ಷ ಗಿರೀಶ್ ಬಸವಣ್ಣನವರ ವಚನವನ್ನು ವಾಚಿಸಿದರು. ಕನ್ನಡ ಸಾಹಿತ್ಯ ಪರಿಷತ್ನ ರವಿರಾಜ್, ನರಸಿಂಹಮೂರ್ತಿ, ರಾಜೇಶ್ ಭಟ್, ಸಂಗೊಳ್ಳಿ ರಾಯಣ್ಣ ಬಳಗದ ಜಿಲ್ಲಾಧ್ಯಕ್ಷ ಸಿದ್ದಬಸವಯ್ಯ ಸ್ವಾಮಿ ಚಿಕ್ಕಮಠ ಉಪಸ್ಥಿತರಿದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಿಲ್ಲಾ ಸಹಾಯಕ ನಿರ್ದೇಶಕಿ ಪೂರ್ಣಿಮಾ ಸ್ವಾಗತಿಸಿದರು. ಬಸವ ಸಮಿತಿ ಜಿಲ್ಲಾ ಅಧ್ಯಕ್ಷ ಶಾಂತೇಗೌಡ ರವರು ವಂದಿಸಿದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ