ರಜೆಯ ಮೇಲೆ ಊರಿಗೆ ಬಂದಿದ್ದ ಸಿಆರ್’ಪಿಎಫ್ ಯೋಧ ಅಪಘಾತಕ್ಕೆ ಬಲಿ
ಬಾಗಲಕೋಟೆ: ರಜೆಯ ಮೇಲೆ ಊರಿಗೆ ಬಂದಿದ್ದ ಸಿಆರ್’ಪಿಎಫ್ ಯೋಧ ಅಪಘಾತಕ್ಕೀಡಾಗಿದ್ದು, ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.
ಚಿದಾನಂದ ಭಜಂತ್ರಿ (52) ಮೃತ ಯೋಧ. ಬಾಗಲಕೋಟೆ ಜಿಲ್ಲೆ ಇಳಕಲ್ ತಾಲ್ಲೂಕಿನ ಗುಡೂರು ಗ್ರಾಮದವರಾದ ಚಿದಾನಂದ ಭಜಂತ್ರಿ 1988ರಲ್ಲಿ ಸಿಆರ್’ಪಿಎಫ್ ಸೇರಿದ್ದರು.
ಪತ್ನಿಗೆ ಅನಾರೋಗ್ಯ ಹಿನ್ನೆಲೆಯಲ್ಲಿ ಚಿದಾನಂದ ಭಜಂತ್ರಿ ಅವರು ಊರಿಗೆ ಆಗಮಿಸಿದ್ದರು. ಆ.9 ರಂದು ಬಾಗಲಕೋಟೆ ತಾಲ್ಲೂಕಿನ ಸೀಮಿಕೇರಿ ಬಳಿ ಇವರ ಬೈಕ್ ಗೆ ಹಿಂಬದಿಯಿಂದ ಮತ್ತೊಂದು ಬೈಕ್ ಡಿಕ್ಕಿ ಹೊಡೆದಿತ್ತು. ಈ ವೇಳೆ ಅವರು ಗಂಭೀರವಾಗಿ ಗಾಯಗೊಂಡಿದ್ದರು.
ಬೆಳಗಾವಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು, ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Ginhq56yzxz2MmHFl94DFN
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka