ರೇಣುಕಾಸ್ವಾಮಿ ಪ್ರಕರಣ: ಇಂದು ಕೋರ್ಟ್ ಗೆ ಹಾಜರಾಗಲಿರುವ ನಟ ದರ್ಶನ್—ಪವಿತ್ರಾ ಗೌಡ ಸಹಿತ 17 ಆರೋಪಿಗಳು

25/02/2025
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳು ಇಂದು ಕೋರ್ಟ್ ಮುಂದೆ ಹಾಜರಾಗಲಿದ್ದಾರೆ. ಬೆಂಗಳೂರಿನ 57ನೇ ಸಿಸಿಹೆಚ್ ಕೋರ್ಟ್ ನಲ್ಲಿ ವಿಚಾರಣೆ ನಡೆಯಲಿದೆ.
ಪ್ರಮುಖ ಆರೋಪಿಗಳಾದ ನಟ ದರ್ಶನ್ ಹಾಗೂ ಪವಿತ್ರಾ ಗೌಡ ಸೇರಿದಂತೆ 17 ಆರೋಪಿಗಳು ಕೋರ್ಟ್ ಗೆ ಹಾಜರಾಗಲಿದ್ದಾರೆ, ಇಂದು 11 ಗಂಟೆಯ ಸುಮಾರಿಗೆ ಕೋರ್ಟ್ ನಲ್ಲಿ ವಿಚಾರಣೆ ನಡೆಯಲಿದೆ.
ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿದ್ದ ನಟ ದರ್ಶನ್ ಮತ್ತು ತಂಡ ಜಾಮೀನಿನ ಮೂಲಕ ಬಿಡುಗಡೆಯಾಗಿದ್ದರು. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಕೋರ್ಟ್ ವಿಚಾರಣೆಯನ್ನು ಎದುರಿಸಲಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: