ತೀವ್ರ ಸ್ವರೂಪ ಪಡೆದುಕೊಂಡ ಬಿಪೊರ್ ಜೊಯ್ ಚಂಡಮಾರುತ: ಹವಾಮಾನ ಇಲಾಖೆ ಮುನ್ಸೂಚನೆ ಹೀಗಿದೆ
ಬೆಂಗಳೂರು: ಅರಬ್ಬಿ ಸಮುದ್ರದಲ್ಲಿ ಬಿಪೊರ್ ಜೊಯ್ ಚಂಡಮಾರುತ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಕರ್ನಾಟಕ ಸೇರಿ 5 ರಾಜ್ಯಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಅರಬ್ಬಿ ಸಮುದ್ರದ ಆಗ್ನೇಯ ಭಾಗದಲ್ಲಿ ಉಂಟಾಗಿದ್ದ ವಾಯುಭಾರ ಕುಸಿತ ಚಂಡಮಾರುತವಾಗಿ ಬದಲಾಗಿತ್ತು. ಕರ್ನಾಟಕದ ದಕ್ಷಿಣ ಒಳನಾಡು, ಕೇರಳ, ಲಕ್ಷದೀಪ ಸಮೂಹಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಕರ್ನಾಟಕದ ಉತ್ತರ ಒಳನಾಡು, ತಮಿಳುನಾಡು, ಆಂಧ್ರಪ್ರದೇಶಗಳಲ್ಲಿ ಸಾಧಾರಣ ಮಳೆಯಾಗಲಿದೆ. ಮಣಿಪುರ, ಮಿಜೋರಾಂ, ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ರಾಜಸ್ಥಾನ ಭಾಗದಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲೂ ಮಳೆ ಮುನ್ಸೂಚನೆ ನೀಡಲಾಗಿದೆ. ಇಂದು ಮತ್ತು ನಾಳೆ ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರಲಿದ್ದು, ಸಂಜೆ ಅಥವಾ ರಾತ್ರಿಯ ವೇಳೆಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/D73015iu7jn2glm2MECosd
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw