ಡಾ.ಅಂಬೇಡ್ಕರ್ ಭಾವಚಿತ್ರಕ್ಕೆ ಅವಮಾನಿಸಿರುವ ಜಡ್ಜ್ ವಜಾಕ್ಕೆ ಶಾಸಕ ಕೆ.ಶಿವನಗೌಡ ಒತ್ತಾಯ
ರಾಯಚೂರು: ಗಣರಾಜ್ಯೋತ್ಸ ದಿನದಂದು ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಅವಮಾನ ಮಾಡಿರುವ ಜಿಲ್ಲಾ ನ್ಯಾಯಾಧೀಶ ಮಲ್ಲಿಕಾರ್ಜುನಗೌಡ ಅವರನ್ನು ಸೇವೆಯಿಂದ ವಜಾ ಮಾಡಬೇಕು ಎಂದು ಶಾಸಕ ಕೆ.ಶಿವನಗೌಡ ನಾಯಕ ಒತ್ತಾಯಿಸಿದ್ದಾರೆ.
ಈ ಕುರಿತು ಗುರುವಾರ ಮಾತನಾಡಿರುವ ಅವರು, ನ್ಯಾಯಾಂಗ ಹುದ್ದೆಯಲ್ಲಿರುವವರು ಸಂವಿಧಾನ ಶಿಲ್ಪಿ ಅವರ ಭಾವಚಿತ್ರಕ್ಕೆ ಅವಮಾನಿಸುವ ಮೂಲಕ ವಿಕೃತಿ ಮನಸ್ಥಿತಿ ಮೆರೆದಿದ್ದಾರೆ. ಅಂಬೇಡ್ಕರ್ ಅವರ ಭಾವಚಿತ್ರವಿದ್ದರೆ ಧ್ವಜಾರೋಹಣ ಮಾಡುವುದಿಲ್ಲ ಎಂದು ಉಡಾಫೆಯಾಗಿ ಮಾತನಾಡಿರುವುದು ನಾಗರಿಕ ಸಮಾಜ ತಲೆತಗ್ಗಿಸಬೇಕಾದ ಸಂಗತಿ ಎಂದರು.
ದೇಶಕ್ಕೆ ಸಂವಿಧಾನ ಬರೆದವರ ಬಗ್ಗೆ ಈ ರೀತಿ ಮಾಡಿರುವುದು ನಾಡಿನೆಲ್ಲೆಡೆ ಆಕ್ರೋಶಕ್ಕೆ ಕಾರಣವಾಗಿದೆ. ಇದು ಅತ್ಯಂತ ನೋವಿನ ಸಂಗತಿಯಾಗಿದ್ದು ಮಾನವ ಕುಲಕ್ಕೆ ಅವಮಾನದ ವಿಚಾರ. ಹೀಗಾಗಿ ತಕ್ಷಣವೇ ಹೈಕೋರ್ಟ್ ನ್ಯಾಯಮೂರ್ತಿಗಳು ಮಧ್ಯ ಪ್ರವೇಶಿಸಿ ಇಂದಿನ ಆಧುನಿಕ ಕಾಲಘಟ್ಟದಲ್ಲೂ ಅಸ್ಪೃಶ್ಯತೆಯ ಮನೋಭಾವ ಉಳಿಸಿಕೊಂಡಿರುವ ಇವರನ್ನು ನ್ಯಾಯಾಂಗ ಇಲಾಖೆಯಿಂದ ವಜಾ ಮಾಡಬೇಕು ಹಾಗೂ ವಿಷಯದ ಕುರಿತು ನಾನು ಸರ್ಕಾರ, ಕಾನೂನು ಇಲಾಖೆಯ ಗಮನಕ್ಕೆ ತಂದು ಪತ್ರ ಬರೆಯುತ್ತೇನೆ ಎಂದು ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Bk3PAoJFRvJLUSBPd39m1C
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಬಿಜೆಪಿ ಸರ್ಕಾರ ಭ್ರಷ್ಟಾಚಾರದಲ್ಲೇ ಕಾಲ ಕಳೆಯುತ್ತಿದೆ: ಪ್ರಿಯಾಂಕ ಖರ್ಗೆ
ಅಕ್ರಮವಾಗಿ ಭಾರತದಲ್ಲಿ ನೆಲೆಸಿದ್ದ ಬಾಂಗ್ಲಾ ಮಹಿಳೆಯ ಬಂಧನ
ಸಿ.ಎಂ.ಇಬ್ರಾಹಿಂ ಕಾಂಗ್ರೆಸ್ ಗೆ ಗುಡ್ ಬೈ
ಸಿದ್ದರಾಮಯ್ಯ ಮುಳುಗುತ್ತಿರುವ ಹಡಗು: ಸಚಿವ ಅಂಗಾರ
ಅನ್ಯಜಾತಿ ಹುಡುಗಿಯೊಂದಿಗೆ ಮದುವೆ: ಲೈಟ್ ಕಂಬಕ್ಕೆ ಕಟ್ಟಿ ಹುಡುಗನ ತಾಯಿ ಮೇಲೆ ಹಲ್ಲೆ