ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯ ಮೊಬೈಲ್ ನಂಬರ್ ಹ್ಯಾಕ್: ಮೋಸ ಹೋಗದಂತೆ ಡಿಸಿ ಮನವಿ
ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರಾಜೇಂದ್ರ ಕೆ.ವಿ. ಅವರ ಮೊಬೈಲ್ ನಂಬರ್ ಹ್ಯಾಕ್ ಆಗಿದ್ದು, 8590710748 ಮೊಬೈಲ್ ನಂಬರ್ ನಿಂದ ಜಿಲ್ಲಾಧಿಕಾರಿ ರಾಜೇಂದ್ರ ಕೆ.ವಿ ಅವರ ಹೆಸರು ಹಾಗೂ ಫೋಟೋ ಬಳಸಿ ವಾಟ್ಸಾಪ್ ಮೂಲಕ ಸಂದೇಶ ಕಳುಹಿಸಿ ಅಪರಿಚಿತರು ಸಹಾಯ ಅಥವಾ ಹಣವನ್ನು ವರ್ಗಾಯಿಸಲು ಕೇಳಬಹುದು. ಆ ನಂಬರ್ ಜಿಲ್ಲಾಧಿಕಾರಿಯವರದ್ದಾಗಿರುವುದಿಲ್ಲ.
ಆದ ಕಾರಣ ಯಾರೂ ಕೂಡ ಯಾವುದೇ ರೀತಿಯಲ್ಲಿ ಸಹಾಯ ಅಥವಾ ಹಣವನ್ನು ಆ ನಂಬರ್ ಗೆ ವರ್ಗಾಯಿಸದಂತೆ ಜಿಲ್ಲಾಧಿಕಾರಿ ರಾಜೇಂದ್ರ ಕೆ.ವಿ. ಅವರು ಮನವಿ ಮಾಡಿದ್ದಾರೆ. 8590710748 ಈ ನಂಬರ್ ನಿಂದ ಯಾವುದೇ ರೀತಿಯ ಮನವಿ ಬಂದಲ್ಲಿ ಅದನ್ನು ಬ್ಲಾಕ್ ಮಾಡಿ ವರದಿ ಮಾಡುವಂತೆಯೂ ಜಿಲ್ಲಾಧಿಕಾರಿಯವರು ಕೋರಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/HeAiP3WAQfT6ajtrJVJ4kP
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka