ಡಿಕೆಶಿ ಕುಡುಕರಂತೆ ತೊದಲುತ್ತಾರೆ, ಕಲೆಕ್ಷನ್ ಗಿರಾಕಿ | ಮೈಕ್ ಆನ್ ಆಗಿರೋದು ತಿಳಿಯದೇ ಮಾತನಾಡಿ ಕಾಂಗ್ರೆಸ್ ನಾಯಕರ ಯಡವಟ್ಟು! - Mahanayaka

ಡಿಕೆಶಿ ಕುಡುಕರಂತೆ ತೊದಲುತ್ತಾರೆ, ಕಲೆಕ್ಷನ್ ಗಿರಾಕಿ | ಮೈಕ್ ಆನ್ ಆಗಿರೋದು ತಿಳಿಯದೇ ಮಾತನಾಡಿ ಕಾಂಗ್ರೆಸ್ ನಾಯಕರ ಯಡವಟ್ಟು!

ugrappa saleem
13/10/2021

ಬೆಂಗಳೂರು: ಮೈಕ್ ಆನ್ ಆಗಿರುವುದು ತಿಳಿಯದೇ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ನಾಯಕರಿಬ್ಬರು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧವೇ ಪರಸ್ಪರ ಮಾತನಾಡಿರುವುದು ಇದೀಗ ಸಂಚಲನ ಮೂಡಿಸಿದೆ. ಕಾಂಗ್ರೆಸ್ ನಾಯಕರಿಗೆ ತಮ್ಮ ಪಕ್ಷದವರ ವಿರುದ್ಧವೇ ಪಕ್ಷದೊಳಗೆ ಎಂತಹ ಮನಸ್ಥಿತಿ ಇದೆ ಎನ್ನುವುದು ಬಯಲಾಗಿದೆ.

ಕೆಪಿಸಿಸಿ ಕಚೇರಿಯಲ್ಲಿ ಕರೆದ ಪತ್ರಿಕಾಗೋಷ್ಠಿಗೂ ಮುನ್ನ ಕಾಂಗ್ರೆಸ್ ನ ಹಿರಿಯ ನಾಯಕ ಉಗ್ರಪ್ಪ ಹಾಗೂ ಸಲೀಂ ಅಹ್ಮದ್ ಗುಟ್ಟಾಗಿ ಮಾತನಾಡಿದ್ದಾರೆ. ಆದರೆ, ಕ್ಯಾಮರ ಮೈಕ್ ಆನ್ ಆಗಿರುವುದು ಅವರಿಗೆ ತಿಳಿದಿರಲಿಲ್ಲ ಎನ್ನಲಾಗಿದೆ. ಅವರಿಬ್ಬರ ಮಾತುಕತೆ ಡಿ.ಕೆ.ಶಿವಕುಮಾರ್ ಅವರ ಬಗ್ಗೆಯಾಗಿದ್ದು, ಅವರ ಹಣ ಹಾಗೂ ವರ್ತನೆಗಳ ಬಗ್ಗೆ ಇಬ್ಬರು ನಾಯಕರು ಕೇವಲವಾಗಿ ಚರ್ಚಿಸಿದ್ದಾರೆ ಎಂದು ವರದಿಯಾಗಿದೆ.

ಡಿ.ಕೆ.ಶಿ ಮಾತನಾಡುವಾಗಿ ಕುಡುರಂತೆ ತೊದಲುತ್ತಾರೆ ಮತ್ತು ಮಾತನಾಡುವಾಗ ಎಮೋಷನ್ ಆಗ್ತಾರೆ, ಸಿದ್ದರಾಮಯ್ಯ ಖಡಕ್ ಆಗಿರ್ತಾರೆ ಎಂದು ಡಿ.ಕೆ.ಶಿವಕುಮಾರ್ ಬಗ್ಗೆ ಹಗುರವಾಗಿ ಮಾತನಾಡುತ್ತಾರೆ. ಜೊತೆಗೆ ಡಿ.ಕೆ.ಶಿವಕುಮಾರ್ ಹುಡುಗರ ಬಳಿಯಲ್ಲಿ ಕೋಟಿ ಗಟ್ಟಲೆ ಹಣ ಇದೆ. ಇನ್ನು ಡಿಕೆ ಬಳಿ ಎಷ್ಟಿರಬಹುದು ಎಂದು ಪ್ರಶ್ನಿಸುತ್ತಾರೆ. ಡಿಕೆ ಕಲೆಕ್ಷನ್ ಗಿರಾಕಿ ಎಂದು ಕೂಡ ಮಾತನಾಡಿದ್ದಾರೆ ಎಂದು ಸುದ್ದಿವಾಹಿನಿಯೊಂದು ವರದಿ ಮಾಡಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR

ಇನ್ನಷ್ಟು ಸುದ್ದಿಗಳು…

ಮದುವೆ ಆದರೂ ‘ಸಿಂಗಲ್’ ಆಗಿರುವ ಮೋದಿ ಬಗ್ಗೆ ಮಾತನಾಡುವ ಧೈರ್ಯ ನಿಮಗಿದೆಯೇ? | ಸುಧಾಕರ್ ಗೆ ಕುಟುಕಿದ ಕಾಂಗ್ರೆಸ್

ನಿರಂತರ ಮಳೆಗೆ ವಾಲಿ ನಿಂತ ಕಟ್ಟಡ: ಯಾವುದೇ ಸಮಯದಲ್ಲಿ ಕಟ್ಟಡ ಕುಸಿಯುವ ಭೀತಿ

SSLC ಪರೀಕ್ಷೆ ಪಾಸ್ ಆದ ವಿದ್ಯಾರ್ಥಿಗಳಿಗೆ 15 ಸಾವಿರ ರೂ. ಪ್ರೋತ್ಸಾಹ ಧನ

ಬಿಜೆಪಿ ಅಭ್ಯರ್ಥಿಗೆ ಸಿಕ್ಕಿದ್ದು ಕೇವಲ ಒಂದೇ ಮತ | ತನ್ನ ಕುಟುಂಬದ 5 ಮಂದಿಯೂ ಬಿಜೆಪಿಗೆ ವೋಟ್ ಹಾಕಲಿಲ್ಲ!

ಉಪ್ಪಿನಂಗಡಿ ಬಸ್ ನಿಲ್ದಾಣದಲ್ಲಿ ಭೀಕರ ಅಪಘಾತ: ತಾಯಿ ಮಗುವಿಗೆ ಡಿಕ್ಕಿ ಹೊಡೆದ ಕೆಎಸ್ಸಾರ್ಟಿಸಿ ಬಸ್

ಮುಸ್ಲಿಮರ ಮುಂಗೈಗೆ ಬೆಲ್ಲ: ಕಾಂಗ್ರೆಸ್ ನ ನಿಜಬಣ್ಣವನ್ನು ಸಿ.ಎಂ.ಇಬ್ರಾಹಿಂ ಬೆತ್ತಲಾಗಿಸಿದ್ದಾರೆ | ಕಾಂಗ್ರೆಸ್ ಗೆ ಚುಚ್ಚಿದ ಬಿಜೆಪಿ

ಬೊಮ್ಮಾಯಿ ಸಂಪುಟದ 4 ಹಾಲಿ ಸಚಿವರಿಗೆ ಕೋಕ್ ನೀಡುವ ಸಾಧ್ಯತೆ | 8 ಶಾಸಕರಿಗೆ ಶೀಘ್ರವೇ ಸಚಿವ ಸ್ಥಾನ!

ಇತ್ತೀಚಿನ ಸುದ್ದಿ