ಹಾದಿ-ಬೀದಿ ಜಗಳ: ಸ್ಥಳ ನಿಯೋಜನೆ ಮಾಡದೆ ಡಿ.ರೂಪಾ, ರೋಹಿಣಿ ಸಿಂಧೂರಿ ವರ್ಗಾವಣೆ: ಮೌನೀಶ್ ಮೌದ್ಗಿಲ್ ಸಹ ಎತ್ತಂಗಡಿ
ಬೆಂಗಳೂರು: ಸಾಮಾಜಿಕ ಜಾಲತಾಣಗಳ ಮೂಲಕ ಹಾಗೂ ಮಾಧ್ಯಮಗಳ ಮುಂದೆ ಬಹಿರಂಗವಾಗಿ ಕಿತ್ತಾಡಿಕೊಂಡು, ಸರ್ಕಾರಕ್ಕೆ ತೀವ್ರ ಮುಜುಗರ ಉಂಟು ಮಾಡಿದ್ದ ಐಪಿಎಸ್ ಅಧಿಕಾರಿ ಡಿ. ರೂಪಾ ಮತ್ತು ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರಿಗೆ ಸ್ಥಳ ನಿಯೋಜನೆ ಮಾಡದೇ ವರ್ಗಾವಣೆ ಮಾಡಲಾಗಿದೆ.
ಡಿ.ರೂಪಾ ಅವರ ಪತಿ, ಐಎಎಸ್ ಅಧಿಕಾರಿ ಮೌನೀಶ್ ಮೌದ್ಗಿಲ್ ಅವರನ್ನೂ ಸಹ ರಾಜ್ಯ ಸರ್ಕಾರ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.
ನಿನ್ನೆಯಷ್ಟೇ ಇಬ್ಬರು ಮಹಿಳಾ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದ ಸರ್ಕಾರ, ಇಂದು ಧಾರ್ಮಿಕ ದತ್ತಿ ಇಲಾಖೆ ಆಯುಕ್ತರಾಗಿದ್ದ ರೋಹಿಣಿ ಸಿಂಧೂರಿ ಅವರನ್ನು ಹಾಗೂ ಕರಕುಶಲ ನಿಗಮದ ವ್ಯವಸ್ಥಾಪಕ ನಿರ್ದೇಶಕಿಯಾಗಿದ್ದ ಡಿ. ರೂಪಾ ಅವರಿಗೆ ಯಾವುದೇ ಹುದ್ದೆ ನೀಡದೆ ವರ್ಗಾವಣೆ ಮಾಡಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw