ಡಾಬಾದಲ್ಲಿ ಊಟ ಮುಗಿಸಿ, ಬೈಕ್ ಹತ್ತಿದ ಸ್ನೇಹಿತರಿಬ್ಬರು ಕ್ಷಣ ಮಾತ್ರದಲ್ಲೇ ಸಾವು!
ಬೆಳಗಾವಿ: ಜೊತೆಯಾಗಿ ಊಟ ಮಾಡಿ ಬೈಕ್ ನಲ್ಲಿ ಪ್ರಯಾಣ ಆರಂಭಿಸಿದ ಇಬ್ಬರು ಸ್ನೇಹಿತರು ಅಪಘಾತದಲ್ಲಿ ಕ್ಷಣ ಮಾತ್ರದಲ್ಲೇ ಸಾವಿಗೀಡಾದ ದಾರುಣ ಘಟನೆ ಕಾಕತಿ ಸಮೀಪದಲ್ಲಿ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ-4ರ ಬಳಿಯಲ್ಲಿ ನಡೆದಿದೆ.
ನಗರದ ಚವಾಟ ಗಲ್ಲಿಯ 21 ವರ್ಷ ವಯಸ್ಸಿನ ಶ್ರೀನಾಥ ದಿಗಂಬರ ಪವಾರ ಮತ್ತು ಸದಾಶಿವ ನಗರದ 21 ವರ್ಷ ವಯಸ್ಸಿನ ರುಚಿತ ಆರ್. ಡುಮಾವತ್ ಮೃತಪಟ್ಟವರಾಗಿದ್ದಾರೆ. ಇವರು ಡಾಬಾವೊಂದರಲ್ಲಿ ಊಟ ಮುಗಿಸಿ ಮನೆಗೆ ಬೈಕ್ ನಲ್ಲಿ ವಾಪಸಾಗುತ್ತಿದ್ದ ವೇಳೆ, ನಗರದ ಹೊರವಲಯದ ಕಾಕತಿ ಸಮೀಪದಲ್ಲಿ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ-4ರ ಬದಿಯಲ್ಲಿ ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಹೊಡೆದಿದೆ. ಪರಿಣಾಮವಾಗಿ ಇಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.
ಮೃತ ಯುವಕರಿಬ್ಬರು ಸ್ನೇಹಿತರಾಗಿದ್ದು, ಸಹಪಾಠಿಗಳೂ ಆಗಿದ್ದರು. ನಗರದ ಖಾಸಗಿ ಕಾಲೇಜಿನಲ್ಲಿ ಬಿ.ಕಾಂ. ಕೊನೆಯ ವರ್ಷದ ವಿದ್ಯಾರ್ಥಿಗಳಾಗಿದ್ದರು ಎಂದು ತಿಳಿದು ಬಂದಿದೆ. ಘಟನೆ ಸಂಬಂಧ ಕಾಕತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಘಟನೆಯ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.
ಇನ್ನಷ್ಟು ಸುದ್ದಿಗಳು…
ವಿದ್ಯುತ್ ಚಾಲಿತ ವಾಹನ ಬಳಸಿದರೆ, ಪೆಟ್ರೋಲ್ ಬೆಲೆ ಇಳಿಯುತ್ತದೆ | ಸಚಿವ ನಾರಾಯಣ ಗೌಡ
“ಕಾರ್ ನನ್ನದು, ಯಾಕ್ರಿ ಟೋಯಿಂಗ್ ಮಾಡ್ತಿದ್ದೀರಿ” | ಟ್ರಾಫಿಕ್ ಪೊಲೀಸರನ್ನು ಗದರಿದ ಮಹಿಳೆ
ವಾನರ ಸೇನೆಯ ದಾಳಿ: ಎರಡನೇ ಮಹಡಿಯಿಂದ ಬಿದ್ದು ಬಿಜೆಪಿ ನಾಯಕನ ಪತ್ನಿ ಸಾವು
2 ವರ್ಷದ ಮಗು ಕೊವಿಡ್ ಗೆ ಬಲಿ: 3ನೇ ಅಲೆಯ ಮುನ್ಸೂಚನೆಯೇ?
ಹೊಟೇಲ್ ನಲ್ಲಿ 16 ವರ್ಷ ವಯಸ್ಸಿನ ಬಾಲಕಿಯ ಅತ್ಯಾಚಾರ | ಬಿಜೆಪಿ, ಜೆಡಿಯು ಮುಖಂಡರ ಸಹಿತ ಮೂವರ ಬಂಧನ
ಅನುಶ್ರೀ ವಿರುದ್ಧ ಮತ್ತೆ ವಿಚಾರಣೆ ನಡೆಯುವ ಸಾಧ್ಯತೆ ಕಡಿಮೆ | ಮಂಗಳೂರು ಪೊಲೀಸ್ ಆಯುಕ್ತ ಎನ್.ಶಶಿಕುಮಾರ್
ತಾಲಿಬಾನ್ ಉಗ್ರನ ಬಂದೂಕಿಗೆ ಎದೆಯೊಡ್ಡಿದ ಅಫ್ಘಾನಿಸ್ತಾನದ ಮಹಿಳೆಯ ಧೈರ್ಯಕ್ಕೆ ಭೇಷ್ ಎಂದ ನೆಟ್ಟಿಗರು!
ಲೈಂಗಿಕ ಆಯಾಸ ಪರಿಹಾರ ಸೇರಿದಂತೆ ಹಲವು ಸಮಸ್ಯೆಗಳಿಗೆ ಖರ್ಜೂರದಲ್ಲಿದೆ ಪರಿಹಾರ




























