ದೈವದ ಮನೆಯ ಬಾಗಿಲು ಮುರಿದು ನಗದು ಕಳವು

daivada mane
13/08/2022

ದೈವದ ಮನೆಯ ಬಾಗಿಲು ಮುರಿದು ಒಳಪ್ರವೇಶಿಸಿದ ಕಳ್ಳರು ಕಾಣಿಕೆ ಹುಂಡಿಯಲ್ಲಿದ್ದ ನಗದು ಕಳವು ಮಾಡಿಕೊಂಡು ಪರಾರಿಯಾಗಿರುವ ಘಟನೆ ಕಿರಿಮಂಜೇಶ್ವರ  ಗ್ರಾಮದ ನಾಗೂರಿನ ಸಿಂಗಾರ ಗರಡಿಯಲ್ಲಿ ನಡೆದಿದೆ.

ಈ ಬಗ್ಗೆ ದೈವದ ಮನೆಯಲ್ಲಿ ಪೂಜೆ ಮಾಡಿಕೊಂಡು ಬರುತ್ತಿರುವ ನಾಗೂರಿನ ಗಣೇಶ್ ಪೂಜಾರಿ ಎಂಬವರು ಪೊಲೀಸರಿಗೆ ದೂರು ನೀಡಿದ್ದಾರೆ‌.

ಆಷಾಢ ಮಾಸದ ಹಿನ್ನೆಲೆಯಲ್ಲಿ ಜುಲೈ 16ರಿಂದ ದೈವ ಮನೆಯಲ್ಲಿ ಯಾವುದೇ ಪೂಜೆ ನಡೆದಿರುವುದಿಲ್ಲ. ಹೀಗಾಗಿ ಆ.10ರಂದು ಸಂಜೆ 4ಗಂಟೆಗೆ ಗಣೇಶ್ ಪೂಜಾರಿ ದೈವದ ಮನೆಗೆ ಹೋಗಿದ್ದರು. ಈ ವೇಳೆ ಕಳ್ಳತನ ನಡೆದಿರುವ ವಿಚಾರ ಗೊತ್ತಾಗಿದೆ.

ಕಳ್ಳರು ದೈವದ ಮನೆಯ ಬಾಗಿಲು ಮುರಿದು ಒಳಪ್ರವೇಶಿಸಿ ಒಳಗಡೆ ಹಾಗೂ ಹೊರಗಡೆ ಇಟ್ಟಿರುವ ಕಾಣಿಕೆ ಹುಂಡಿಯನ್ನು ಒಡೆದು ಅದರಲ್ಲಿದ್ದ ಸುಮಾರು 30ರಿಂದ 35 ಸಾವಿರ ರೂ. ಹಣವನ್ನು ಕಳವು ಮಾಡಿಕೊಂಡು ಹೋಗಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಈ ಬಗ್ಗೆ ಬೈಂದೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಾಂದರ್ಭಿಕ ಚಿತ್ರ

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IaxQSuNxGHREVEoloSpDOO

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

FacebookTwitterWhatsappInstagramEmailTelegram

ಇತ್ತೀಚಿನ ಸುದ್ದಿ

Exit mobile version