ಭಾರೀ ಮಳೆ: ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಜುಲೈ 8, 9 ಎರಡು ದಿನ ರಜೆ ಘೋಷಣೆ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಮುಂದುವರಿದಿದ್ದು, ಈ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಶುಕ್ರವಾರ ಹಾಗೂ ಶನಿವಾರವೂ ಎಲ್ಲಾ ಶಾಲಾ ಕಾಲೇಜುಗಳಿಗೆ ಜಿಲ್ಲಾಡಳಿತ ರಜೆ ಘೋಷಿಸಿದೆ.
ಜುಲೈ 8 ಮತ್ತು 9ರಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದ್ದು, ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು, ಪದವಿ ಪೂರ್ವ, ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮಾ, ಇಂಜಿನಿಯರಿಂಗ್, ಐಟಿಐ ಸೇರಿದಂತೆ ಎಲ್ಲಾ ಸರ್ಕಾರಿ ಅನುದಾನಿತ ಹಾಗೂ ಖಾಸಗಿ ವಿದ್ಯಾ ಸಂಸ್ಥೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಆದೇಶ ಹೊರಡಿಸಿದ್ದಾರೆ.
ಇನ್ನೂ ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿ ತೀರ ಸಮುದ್ರ ತೀರಕ್ಕೆ ಮಕ್ಕಳು ಹೋಗದಂತೆ ಪಾಲಕರು ಎಚ್ಚರವಹಿಸುವಂತೆ ತೀಳಿಸಲಾಗಿದೆ.
ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಮುನ್ಸೂಚನೆ ನೀಡಲಾಗಿದೆ. ಪ್ರವಾಸಿಗರು ಸಮುದ್ರ ತೀರಕ್ಕೆ ತೆರಳದಂತೆ ಸೂಚನೆ ನೀಡಲಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IaxQSuNxGHREVEoloSpDOO
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka